ಬೆಂಗಳೂರು : ಇಂದು ಬೆಂಗಳೂರಿನ ಸದಾಶಿವ ನಗರದಲ್ಲಿ ಇರುವಂತಹ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮನೆಗೆ ಸಿಎಂ ಸಿದ್ದರಾಮಯ್ಯ ಉಪಹಾರ ಕೂಟಕ್ಕೆ ಆಗಮಿಸಿದ್ದರು. ನಿನ್ನೆ ಸಿಎಂ ಸಿದ್ದರಾಮಯ್ಯ ಅವರಿಗೆ ಡಿಕೆ ಶಿವಕುಮಾರ್ ಅಧಿಕೃತವಾಗಿ ನಮ್ಮ ಮನೆಗೆ ನಾಳೆ ಬ್ರೇಕ್ ಫಾಸ್ಟ್ ಗೆ ಬನ್ನಿ ಎಂದು ಆಹ್ವಾನ ನೀಡಿದರು. ಈ ಹಿನ್ನಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಅವರ ಮನೆಗೆ ಭೇಟಿ ನೀಡಿದ್ದಾರೆ.
ಬ್ರೇಕ್ ಫಾಸ್ಟ್ ವೇಳೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಒಂದೇ ಬ್ರಾಂಡ್ ವಾಚ್ ಧರಿಸಿರುವುದು ಇದೀಗ ಗಮನ ಸೆಳೆದಿದೆ. ಇದೀಗ ಗಮನ ಸೆಳೆದಿದೆ. ಕಾರ್ಟಿಯರ್ ಬ್ರಾಂಡ್ ವಾಚ್ ಕಟ್ಟಿಕೊಂಡಿದ್ದರು. ಬ್ರೇಕ್ ಫಾಸ್ಟ್ ಮುಗಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾನು ಮತ್ತು ಡಿಕೆ ಶಿವಕುಮಾರ್ ಬ್ರದರ್ಸ್ ನಮ್ಮದು ಒಂದೇ ಪಕ್ಷ ಹಾಗೂ ಒಂದೇ ಸಿದ್ಧಾಂತ ಎಂದು ಮತ್ತೆ ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ ಒಗಟ್ಟಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು.







