ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ನಲ್ಲಿ ಹಿನ್ನಡೆ ಆಗುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಆರೋಪ ಮುಕ್ತವಾಗಿ ಹೊರಬರುತ್ತಾರೆ. ಹೈಕೋರ್ಟ್ ನಲ್ಲಿ ಅವರಿಗೆ ಹಿನ್ನಡೆ ಆಗುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.
ಇನ್ನು ಸತೀಶ್ ಜಾರಕಿಹೊಳಿ ಹಾಗೂ ಡಾ.ಜಿ.ಪರಮೇಶ್ವರ್ ಭೇಟಿ ಕುರಿತು ಪ್ರತಿಕ್ರಿಯೆ ನೀಡಿದ ಸಚಿವ ಎಂ.ಬಿ.ಪಾಟೀಲ್, 2 ತಿಂಗಳ ಹಿಂದೆ ಡಾ.ಪರಮೇಶ್ವರ್ ನಮ್ಮ ಮನೆಗೂ ಬಂದಿದ್ದರು. ಮೊನ್ನೆ ನಾನು ಕೂಡ ಪರಮೇಶ್ವರ್ ನಿವಾಸಕ್ಕೆ ಹೋಗಿದ್ದೆ. ಪಕ್ಷದ ವಿಚಾರ ಚರ್ಚೆ ಮಾಡುವುದರಲ್ಲಿ ತಪ್ಪೇನಿದೆ. ಭೇಟಿ ವೇಳೆ ರಾಜಕೀಯ ಚರ್ಚೆ ಮಾಡೇ ಮಾಡುತ್ತೇವೆ ಎಂದರು.