ಬೆಂಗಳೂರು : ಕಳೆದ ವರ್ಷ ಸಹಕಾರ ಸಂಘಗಳ ಕಾಯ್ದೆಯ ತಿದ್ದುಪಡಿ ಮಾಡಿದ್ದ ಸಿದ್ದರಾಮಯ್ಯ ಸರ್ಕಾರಕ್ಕೆ ಹಿನ್ನೆಡೆಯಾಗಿದೆ. ಸಹಕಾರ ಸಂಘಗಳ ಕಾಯ್ದೆಯ ತಿದ್ದುಪಡಿ ಸಂವಿಧಾನಬಾಹಿರ. ಅಲ್ಲದೇ ಸಂವಿಧಾನದ ಉಲ್ಲಂಘನೆ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಹೌದು ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಮೀಸಲಾತಿಯನ್ನು ಖಾತ್ರಿಪಡಿಸುವ ಮೂಲಕ ಪ್ರಮುಖ ಸಹಕಾರ ಸಂಸ್ಥೆಗಳ ಆಡಳಿತ ಮಂಡಳಿಗಳಲ್ಲಿ ಮೀಸಲಾತಿ ಆಧಾರದ ಮೇಲೆ ಸರ್ಕಾರದ ನಾಮನಿರ್ದೇಶಿತರ ಸಂಖ್ಯೆಯನ್ನು ಮೂರಕ್ಕೆ ಹೆಚ್ಚಿಸುವ ಕರ್ನಾಟಕ ಸಹಕಾರ ಸಂಘಗಳ(ತಿದ್ದುಪಡಿ) ಮಸೂದೆಯನ್ನು ಸಿದ್ದರಾಮಯ್ಯ ಸರ್ಕಾರ ಅಂಗೀಕರಿಸಿತ್ತು.
ಇನ್ನು ಈ ಕುರಿತು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ಸಹಕಾರ ಸಂಘಗಳ ಪರ ಹಿರಿಯ ವಕೀಲ ಎ ಕೇಶವ ಭಟ್ 2023ರಲ್ಲಿ ಸಹಕಾರ ಸಂಘಗಳ ಕಾಯ್ದೆಯನ್ನು ತಿದ್ದುಪಡಿ ಮಾಡಿತ್ತು. ಸಿಬ್ಬಂದಿ ನೇಮಕ ವರ್ಗಾವಣೆ ಅಧಿಕಾರವನ್ನು ಸರ್ಕಾರ ಪಡೆದಿತ್ತು. ಇದರಿಂದ ಸಹಕಾರ ಸಂಘಗಳ ಸ್ವಯತ್ತತೆಗೆ ಧಕ್ಕೆ ಆಗುತ್ತೆ ಎಂದು ಸಹಕಾರ ಸಂಘಗಳ ಪರ ಹಿರಿಯ ವಕೀಲ ಎ ಕೇಶವ ಭಟ್ ವಾದಿಸಿದ್ದರು.ವಿಚಾರಣೆ ಬಳಿಕ ಹೈಕೋರ್ಟ್ ತಿದ್ದುಪಡಿ ಸಂವಿಧಾನದ ಆರ್ಟಿಕಲ್ 19(1)ಸಿ ಉಲ್ಲಂಘನೆ ಎಂದು ತೀರ್ಪು ನೀಡಿದೆ. ನ್ಯಾ.ಅನಂತ ರಾಮನಾಥ ಹೆಗಡೆ ಅವರಿದ್ದ ಹೈಕೋರ್ಟ್ ಪೀಠ ಈ ತೀರ್ಪು ನೀಡಿದೆ.
ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಸಹಕಾರ ಸಂಘಗಳ ತಿದ್ದುಪಡಿ ಮಸೂದೆಯನ್ನು ರಾಜ್ಯ ಸರ್ಕಾರ 2024 ಫೆಬ್ರವರಿ 20ರಂದು ವಿಧಾನಸಭೆಯಲ್ಲಿ ಅಂಗೀಕರಿಸಿದ್ದು, ಎಸ್‌ಸಿ/ಎಸ್‌ಟಿ ಸಮುದಾಯದಿಂದ ಒಬ್ಬರು, ಮಹಿಳೆ ಮತ್ತು ಸಾಮಾನ್ಯ ವರ್ಗದ ಒಬ್ಬರು ನಿರ್ದೇಶಕರಾಗಿರುತ್ತಾರೆ. ಈಗ 22 ಇರುವ ಅಪೆಕ್ಸ್ ಬ್ಯಾಂಕ್‌ನ ಆಡಳಿತ ಮಂಡಳಿಯ ಸಂಖ್ಯೆ ಇನ್ನುಮುಂದೆ 25ಕ್ಕೆ ಏರಲಿದ್ದು, ಪ್ರಮುಖ ನಿರ್ಧಾರ ತೆಗೆದುಕೊಳ್ಳುವಲ್ಲಿ ಸರ್ಕಾರ ಮೇಲುಗೈ ಸಾಧಿಸಿತ್ತು. ಆದ್ರೆ, ಇದೀಗ ಕೋರ್ಟ್ ಈ ತಿದ್ದುಪಡಿ ಕಾಯ್ದೆಯನ್ನು ಸಂವಿಧಾನಬಾಹಿರ ಎಂದಿದೆ.