ಮಂಡ್ಯ : ರಾಜ್ಯ ಸರ್ಕಾರ ಗುತ್ತಿಗೆದಾರರ ಕಾಮಗಾರಿ ಬಿಲ್ ಬಾಕಿ ಉಳಿಸಿಕೊಂಡ ಹಿನ್ನೆಲಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರರು ಇದೀಗ ತಿರುಗಿ ಬಿದ್ದಿದ್ದಾರೆ. ಅಲ್ಲದೇ ಮಾರ್ಚ್ 5 ರಂದು ಪ್ರತಿಭಟನೆ ಮಾಡಲು ಗುತ್ತಿಗೆದಾರರು ಬೃಹತ್ ಹೋರಾಟಕ್ಕೆ ಕರೆ ನೀಡಿದ್ದಾರೆ.
ಮಂಡ್ಯದಲ್ಲಿ ಗುತ್ತಿಗೆದಾರರ ಸಂಘದ ಪೂರ್ವಭಾವಿ ಸಭೆಯಲ್ಲಿ ಈ ಒಂದು ನಿರ್ಧಾರ ತೆಗೆದುಕೊಂಡಿದ್ದು, ಮಂಡ್ಯದಲ್ಲಿ ಲೋಕೊಪಯೋಗಿ ಇಲಾಖೆ ಕಚೇರಿ ಆವರಣದಲ್ಲಿ ಸಭೆ ನಡೆಸಲಾಗಿತ್ತು. ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಮಂಜುನಾಥ ನೇತೃತ್ವದಲ್ಲಿ ಈ ಒಂದು ಸಭೆ ನಡೆದಿದ್ದು, ಸರ್ಕಾರ ಗುತ್ತಿಗೆದಾರರ 37 ಸಾವಿರ ಕೋಟಿ ಹಣ ಬಾಕಿ ಉಳಿಸಿಕೊಂಡಿದೆ.
ಮಂಡ್ಯ ಜಿಲ್ಲೆಯಲ್ಲಿ ಗುತ್ತಿಗೆದಾರರ 950 ಕೋಟಿ ಹಣ ಬಾಕಿ ಉಳಿಸಿಕೊಂಡಿದ್ದರಿಂದ ಗುತ್ತಿಗೆದಾರರಿಗೆ ಸಂಕಷ್ಟದ ಪರಿಸ್ಥಿತಿ ಎದುರಾಗಿದೆ. ಸಣ್ಣ ಪುಟ್ಟ ಗುತ್ತಿಗೆ ಕೆಲಸ ಮಾಡಿದರು ನಮಗೆ ದುಡ್ಡು ಕೊಡುತ್ತಿಲ್ಲ ಸಾಲ ಸೋಲ ಮಾಡಿ ಕೆಲಸ ಮಾಡಿದ್ದೇವೆ ಈಗ ಬಡ್ಡಿ ಕಟ್ಟಲು ಆಗುತ್ತಿಲ್ಲ ಸಮಸ್ಯೆ ಸರಿಪಡಿಸುವಂತೆ ಮನವಿ ಮಾಡಿದರು ಯಾರು ಆಲಿಸುತ್ತಿಲ್ಲ. ಹಿಂದಿನ ಬಿಜೆಪಿ ಸರ್ಕಾರ ಗಿಂತ ಈಗ ಕಮಿಷನ್ ಹಾವಳಿ ಹೆಚ್ಚಾಗಿದೆ.
ಈ ಹಿಂದೆ ನಮ್ಮ ಬೆನ್ನಿಗೆ ನಿಂತು ಈಗ ಅವರೇ ಭ್ರಷ್ಟರಾಗಿದ್ದಾರೆ. ನಮ್ಮಿಂದಲೇ ಅಧಿಕಾರಕ್ಕೆ ಬಂದವರು ನಮ್ಮನೆ ಕಡೆಗಣಿಸಿದ್ದಾರೆ ಸರಕಾರ ಎಚ್ಚೆತ್ತು ತಕ್ಷಣವೇ ಬಾಕಿ ಹಣ ಬಿಡುಗಡೆ ಮಾಡಬೇಕು ಇಲ್ಲದಿದ್ದರೆ ನಮ್ಮ ಬಗ್ಗೆ ತೋರಿಸುತ್ತೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಗುತ್ತಿಗೆದಾರರ ಸಂಘದ ರಾಜ್ಯ ಅಧ್ಯಕ್ಷ ಆರ್ ಮಂಜುನಾಥ್ ಎಚ್ಚರಿಕೆ ನೀಡಿದ್ದಾರೆ.








