ಬೆಂಗಳೂರು : ನಿವೃತ್ತ ನ್ಯಾಯಮೂರ್ತಿ ಎಚ್.ಎಸ್. ನಾಗಮೋಹನ್ ದಾಸ್ ಅಧ್ಯಕ್ಷತೆಯ ಏಕಸದಸ್ಯ ಆಯೋಗ ಇಂದು ಬೆಳಗ್ಗೆ 11 ಗಂಟೆಗೆ ಮಧ್ಯಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಲಿದೆ.
ಒಳ ಮೀಸಲಾತಿ ಕಲ್ಪಿಸುವ ಸಂಬಂಧ ಸೂಕ್ತ ಶಿಫಾರಸುಗಳೊಂದಿಗೆ ವರದಿ ಸಲ್ಲಿಸಲು ರಾಜ್ಯ ಸರ್ಕಾರದ ನಿವೃತ್ತ ನ್ಯಾಯಮೂರ್ತಿ ಎಚ್.ಎಸ್. ನಾಗಮೋಹನ್ ದಾಸ್ ಅಧ್ಯಕ್ಷತೆಯಲ್ಲಿ ಏಕಸದಸ್ಯ ಆಯೋಗವನ್ನು ನವೆಂಬರ್ ತಿಂಗಳಿನಲ್ಲಿಯೇ ರಚಿಸಲಾಗಿದೆ. ಡಿಸೆಂಬರ್ ಮೊದಲ ವಾರದಲ್ಲಿ ಆಯೋಗಕ್ಕೆ ಹೊಣೆ ನಿಗದಿಪಡಿಸಲಾಗಿತ್ತು. ರಾಜ್ಯದಲ್ಲಿ ಲಭ್ಯವಿರುವ ದತ್ತಾಂಶ ಮತ್ತು 2011ರ ಜನಗಣತಿ ಆಧಾರದಲ್ಲಿ ಪರಿಶಿಷ್ಟ ಜಾತಿಗಳಲ್ಲಿ ವೈಜ್ಞಾನಿಕ ಮತ್ತು ತರ್ಕಬದ್ದ ಒಳ ಮೀಸಲಾತಿ ನೀಡುವ ಕುರಿತು ಪರಿಶೀಲಿಸಿ ಆಯೋಗ ವರದಿ ನೀಡುತ್ತಿದೆ.
ಇಂದು ಬೆಳಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ ಕೊಠಡಿಯಲ್ಲಿ ಒಳಮೀಸಲಾತಿ ಕುರಿತಿ ಮಧ್ಯಂತರ ವರದಿಯನ್ನು ನ್ಯಾ. ನಾಗಮೋಹನ್ ದಾಸ್ ಸಲ್ಲಿಸಲಿದ್ದಾರೆ.








