ಬೆಂಗಳೂರು : ಬೆಂಗಳೂರು ಸೇರಿ ರಾಜ್ಯದ ವಿವಿಧ ನಗರಗಳಲ್ಲಿ ಒದಗಿಸುತ್ತಿರುವ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ ಗೊಳಿಸುವಂತೆ ಓಲಾ, ಉಬರ್ಕಂಪನಿಗಳಿಗೆ ನಿರ್ದೇಶಿಸಿ ಹೈಕೋರ್ಟ್ ಏಕ ಸದಸ್ಯ ಪೀಠ ಹೊರಡಿಸಿರುವ ಆದೇಶಕ್ಕೆ ತಡೆಯಾಜ್ಞೆ ನೀಡಲು ವಿಭಾಗೀಯ ಪೀಠ ನಿರಾಕರಿಸಿದೆ. ಹೀಗಾಗಿ ಈ ಮೊದಲು ನಿಗದಿ ಆದಂತೆ ಜೂ.16ರಿಂದ ಬೈಕ್ ಟ್ಯಾಕ್ಸಿ ಕ್ಸಿ ಸೇವೆಗೆ ಸಂಪೂರ್ಣ ನಿರ್ಬಂಧ ಬೀಳಲಿದೆ.
ಓಲಾ, ಊಬರ್ ರ್ಯಾ ಪಿಡೋ ಬೈಕ್ ಟ್ಯಾಕ್ಸಿ ಗಳಿಗೆ ಹೈಕೋರ್ಟ್ ಶಾಕ್ ನೀಡಿದ್ದು, ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿಗೆ ಹೈಕೋರ್ಟ್ ನಿರಾಕರಿಸಿದೆ. ಮೇಲ್ಮನವಿ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಜೂನ್ 24ಕ್ಕೆ ನಿಗದಿಪಡಿಸಿದೆ.
ವಿಚಾರಣೆ ವೇಳೆ ಸರ್ಕಾರದ ಪರವಾಗಿ ಎಜಿ ಶಶಿಕಿರಣ ಶೆಟ್ಟಿ ವಾದ ಮಂಡಿಸಿದರು. ಬೈಕ್ ಟ್ಯಾಕ್ಸಿಗಳ ಪರ್ಮಿಟ್ ನಿಮ್ಮ ರೂಪಿಸಲು ಸರ್ಕಾರ ಸಿದ್ಧವಿಲ್ಲ 8 ರಾಜ್ಯಗಳಲ್ಲಿ ಮಾತ್ರ ಬೈಕ್ ಟ್ಯಾಕ್ಸಿಗೆ ಪರ್ಮಿಟ್ ನೀಡಲಾಗಿದೆ. ಕರ್ನಾಟಕ ಸೇರಿದಂತೆ ಉಳಿದ ರಾಜ್ಯಗಳಲ್ಲಿ ಅನುಮತಿ ನೀಡಲಾಗಿಲ್ಲ. ಕರ್ನಾಟಕದಲ್ಲಿ ಸರ್ಕಾರ ಬೈಕ್ ಟ್ಯಾಕ್ಸಿಗೆ ಪೆರ್ಮಿಟ್ ನೀಡಿಲ್ಲ 4 ವರ್ಷಗಳಿಂದ ಮಧ್ಯಂತರ ಆದೇಶದ ಮೇಲೆ ಬೈಕ್ ಟ್ಯಾಕ್ಸಿ ನಡೆಯುತ್ತಿದೆ ಸುಪ್ರೀಂಕೋರ್ಟ್ ಕೂಡ ಮಧ್ಯಂತರ ಆದೇಶ ನಿರಾಕರಿಸಿದೆ ಎಂದು ಸರ್ಕಾರದ ಪರವಾಗಿ ಎಜಿ ಶಶಿಕಿರಣ್ ಶೆಟ್ಟಿ ವಾದಿಸಿದರು.
ಅಲ್ಲದೆ, ಬೈಕ್ ಟ್ಯಾಕ್ಸಿಗಳ ಸೇವೆ ಕಾರ್ಯಚರಣೆ ಮುಂದುವರೆಸುವ ಸಂಬಂಧ ಮದ್ಯಂತರ ಪರಿಹಾರ ನೀಡಿದ್ದ ಏಕಸದಸ್ಯ ಪೀಠದ ಆದೇಶಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಪೀಠ, ಸರ್ಕಾರ ಬೈಕ್ ಟ್ಯಾಕ್ಸಿ ಸೇವೆ ಮುಂದುವರೆಸಲು ನಿಯಮಗಳನ್ನು ರೂಪಿಸುವಂತಿದ್ದರೆ, ಬಲವಂತದ ಕ್ರಮಕ್ಕೆ ಮುಂದಾಗಬಾರದು ಎಂಬುದಾಗಿ ಹೇಳಬಹುದಾಗಿತ್ತು. ಆದರೆ, ಸರ್ಕಾರ ನಿಯಮಗಳನ್ನು ರೂಪಿಸುತ್ತಿಲ್ಲಎಂದು ತಿಳಿಸಿದೆ. ಹೀಗಾಗಿ, ಮಧ್ಯಂತರ ಪರಿಹಾರ ನೀಡಲಾಗದು ಎಂದು ಪೀಠ ಹೇಳಿದೆ.