Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮ್ಯಾನ್ಮಾರ್ ಆಸ್ಪತ್ರೆಯ ಮೇಲೆ ವೈಮಾನಿಕ ದಾಳಿ: 31 ಜನರ ಧಾರುಣ ಸಾವು | Myanmar airstrike

11/12/2025 10:41 AM

BIG NEWS : ರಾಜ್ಯದಲ್ಲಿ `ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ’ ಆಯ್ಕೆಗೆ ಈ ಮಾನದಂಡಗಳ ಪಾಲನೆ ಕಡ್ಡಾಯ.!

11/12/2025 10:37 AM

New Labour codes: ನಿಮ್ಮ ಸಂಬಳಕ್ಕೆ ಧಕ್ಕೆಯಿಲ್ಲ! 15,000 ರೂ. ಪಿಎಫ್ ಮಿತಿಯಲ್ಲಿದ್ದರೆ ಹೊಸ ಲೇಬರ್ ಕೋಡ್‌ಗಳಿಂದ ಕಡಿತವಿಲ್ಲ!

11/12/2025 10:34 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ `ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ’ ಆಯ್ಕೆಗೆ ಈ ಮಾನದಂಡಗಳ ಪಾಲನೆ ಕಡ್ಡಾಯ.!
KARNATAKA

BIG NEWS : ರಾಜ್ಯದಲ್ಲಿ `ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ’ ಆಯ್ಕೆಗೆ ಈ ಮಾನದಂಡಗಳ ಪಾಲನೆ ಕಡ್ಡಾಯ.!

By kannadanewsnow5711/12/2025 10:37 AM

ಬೆಂಗಳೂರು : ರಾಜ್ಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಆಯ್ಕೆ ಮಾಡಲು ಈ ಮಾನದಂಡಗಳ ಪಾಲನೆ ಕಡ್ಡಾಯವಾಗಿದೆ.

ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಆಯ್ಕೆಯ ಮಾನದಂಡಗಳು

1. ಅರ್ಹತೆ: ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

II. ವಯೋಮಿತಿ

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು 19-35 ವರ್ಷ ವಯೋಮಿತಿಯೊಳಗಿನ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ಯ ಅಲ್ಪಸಂಖ್ಯಾತರು ಅರ್ಜಿ ಸಲ್ಲಿಸಬಹುದು ಹಾಗೂ ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

III. ಸ್ಥಳೀಯತೆ

1. ಗ್ರಾಮಾಂತರ ಪ್ರದೇಶದ ಅಂಗನವಾಡಿ ಕೇಂದ್ರವಾದಲ್ಲಿ ಆಯಾ ಕಂದಾಯ ಗ್ರಾಮದಲ್ಲಿ ವಾಸ್ತವ್ಯ ಹೊಂದಿರಬೇಕು. ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಆಯ್ಕೆಗೆ ಸ್ಥಳೀಯ ಮಜಿರೆ, ತಾಂಡಾ ಹಾಗೂ ಹಾಡಿಗೆ ಸೇರಿದವರಾಗಿದ್ದರೆ ಸಂಬಂಧಿಸಿದ ವಾಸ್ತವ್ಯ ಪ್ರಮಾಣ ಪತ್ರವನ್ನು ಸಕ್ಷಮ ಪ್ರಾಧಿಕಾರದಿಂದ ಪಡೆಯುವುದು.

2. ನಗರ ಪ್ರದೇಶದ ಅಂಗನವಾಡಿ ಕೇಂದ್ರವಾದಲ್ಲಿ ಆಯಾ ಕಂದಾಯ ವಾರ್ಡ್‌ನಲ್ಲಿ ವಾಸ್ತವ್ಯ ಹೊಂದಿರಬೇಕು ಹಾಗೂ ವಾಸ್ತವ್ಯ ಪ್ರಮಾಣ ಪತ್ರವನ್ನು ಸಕ್ಷಮ ಪ್ರಾಧಿಕಾರದಿಂದ [ಚುನಾವಣಾ ವಾರ್ಡ್ಗಳನ್ನು ಪರಿಗಣಿಸುವಂತಿಲ್ಲ ಪಡೆದಿರಬೇಕು.

3. ತಹಶೀಲ್ದಾರ್ / ಉಪ ತಹಶೀಲ್ದಾರ್‌ರವರ ಮೂರು ವರ್ಷದ ವಾಸ್ತವ್ಯ ದೃಢೀಕರಣದೊಂದಿಗೆ ಸ್ಥಳೀಯರು ಎಂಬುದನ್ನು ದೃಢೀಕರಿಸಲು ಪೂರಕ ದಾಖಲೆಗಳಾಗಿ ಆಧಾರ ಕಾರ್ಡ್, ರೇಷನ್ ಕಾರ್ಡ್ ಮತದಾರರ ಗುರುತಿನ ಚೀಟಿಗಳನ್ನು ಪಡೆಯುವುದು. ಮಜಿರೆ, ತಾಂಡಾ ಹಾಗೂ ಹಾಡಿಗೆ ಸೇರಿದವರಾಗಿದ್ದರೆ ಸಂಬಂಧಿಸಿದ ವಾಸ್ತವ್ಯ ಪ್ರಮಾಣ ಪತ್ರ ಪಡೆಯುವುದು.

IV. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಹತೆ:-

1. 2 P.U.C. ತೇರ್ಗಡೆ ಹೊಂದಿರಬೇಕು. S.S.L.C.ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
2. ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ ಸಂದರ್ಭದಲ್ಲಿ “ಸರ್ಕಾರದ ಅಂಗೀಕೃತ ಸಂಸ್ಥೆಗಳಿಂದ D.S.E.R.T.ಯಿಂದ ECCE ಡಿಪ್ಲೊಮಾ ಕೋರ್ಸ್. JOC ಕೋರ್ಸ್, N.T.T. ಕೋರ್ಸ್‌ಗಳನ್ನು ಹಾಗೂ ಅಂಗನವಾಡಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಡಿಪ್ಲೊಮಾ ನ್ಯೂಟ್ರಿಷಿಯನ್, ಹೋಂ ಸೈನ್ಸ್ ಸರ್ಟಿಫಿಕೇಟ್ ಕೋರ್ಸ್, ಒಂದು ವರ್ಷದ ನರ್ಸರಿ ಅಥವಾ ಪೂರ್ವ ಪ್ರಾಥಮಿಕ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿದವರಿಗೆ ಮೊದಲ ಆದ್ಯತೆ ನೀಡುವುದು ಹಾಗೂ ಸದರಿಯವರಿಗೆ ಬೋನಸ್ +5 ಅಂಕಗಳನ್ನು ನೀಡುವುದು.

V. ಅಂಗನವಾಡಿ ಸಹಾಯಕಿ ವಿದ್ಯಾರ್ಹತೆ:

ಹುದ್ದೆಗೆ ಕನಿಷ್ಟ ವಿದ್ಯಾರ್ಹತೆ SSLC ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣವಾಗಿರಬೇಕು.

ಅ) ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಮುಕ್ತ ಶಾಲೆ/ಮುಕ್ತ ವಿದ್ಯಾಲಯಗಳಲ್ಲಿ S.S.LC. ತೇರ್ಗಡೆ ಹೊಂದಿದ ಅಭ್ಯರ್ಥಿಗಳು ಪ್ರಥಮ/ದ್ವಿತೀಯ ಭಾಷೆಯಾಗಿ ಕನ್ನಡ ಹಾಗೂ ಸಾಮಾನ್ಯ ಗಣಿತ ಮತ್ತು ಸಮಾಜ ಶಾಸ್ತ್ರ/ಸಮಾಜ ವಿಜ್ಞಾನ ವಿಷಯಗಳನ್ನು ಕಡ್ಡಾಯವಾಗಿ ವ್ಯಾಸಂಗ ಮಾಡಿದ್ದು ಪ್ರಮಾಣ ಪತ್ರ/ಅಂಕಪಟ್ಟಿಯು ಗರಿಷ್ಠ 625 ಕನಿಷ್ಠ 219 ಅಭ್ಯರ್ಥಿಗಳನ್ನು ಹೊಂದಿದ್ದಲ್ಲಿ ಅಂಕಗಳನ್ನು ಪರಿಗಣಿಸತಕ್ಕದ್ದು. ಅಂತಹ

ಆ) ಬೇರೆ ರಾಜ್ಯಗಳಲ್ಲಿ ವ್ಯಾಸಂಗ ಮಾಡಿದ್ದು, ಕನ್ನಡವನ್ನು ಪ್ರಥಮ/ದ್ವಿತೀಯ ಭಾಷೆಯಾಗಿ ಅಭ್ಯಾಸ ಮಾಡಿದರೂ SSLC ಪರೀಕ್ಷೆಗೆ ಆ ರಾಜ್ಯದಲ್ಲಿ ನಿಗದಿಪಡಿಸಿದ ಗರಿಷ್ಟ ಹಾಗೂ ಕನಿಷ್ಠ ಅಂಕಗಳು ಹಾಗೂ ಕರ್ನಾಟಕ ರಾಜ್ಯದಲ್ಲಿ ನಿಗದಿಪಡಿಸಿದ ಗರಿಷ್ಟ ಹಾಗೂ ಕನಿಷ್ಟ ಅಂಕದಲ್ಲಿ ವ್ಯತ್ಯಾಸವಿದ್ದಲ್ಲಿ ಕರ್ನಾಟಕದಲ್ಲಿ ವ್ಯಾಸಂಗ ಮಾಡಿದ ಅಭ್ಯರ್ಥಿಗಳನ್ನು ಪರಿಗಣಿಸತಕ್ಕದ್ದು. ಮಾತ್ರ

ಇ) ಅಂಗನವಾಡಿ ಸಹಾಯಕಿಯರು ಯಾವುದೇ ಭಾಷಾ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ್ದರೂ ಹಾಗೂ ಯಾವುದೇ ರಾಜ್ಯದಲ್ಲಿ ವ್ಯಾಸಂಗ ಮಾಡಿದ್ದರೂ ಸಹಾ ಅವರು ಕನ್ನಡ ಭಾಷೆಯನ್ನು ಪ್ರಥಮ /ದ್ವಿತೀಯ ಭಾಷೆಯಾಗಿ ವ್ಯಾಸಂಗ ಮಾಡಿರಬೇಕು. ಹಾಗೂ ಮಾತೃಭಾಷೆ ಕನ್ನಡವಲ್ಲದೇ ಇರುವ ಅಭ್ಯರ್ಥಿಗಳಿಗೆ ಆಯ್ಕೆ ಸಮಿತಿಯು ಆಯ್ಕೆ ಸಮಯದಲ್ಲಿ ಸಂದರ್ಶನ ಏರ್ಪಡಿಸಿ ಹಾಗೂ ಅವಶ್ಯವಿದ್ದಲ್ಲಿ ಕನ್ನಡ ಭಾಷೆಯ ಜ್ಞಾನದ ಕುರಿತಂತೆ ಓದಿಸಿ, ಬರೆಸಿ ಅವರ ಕನ್ನಡ ಭಾಷಾ ಜ್ಞಾನವನ್ನು ಪರೀಕ್ಷಿಸಿ ಅವರನ್ನು ಆಯ್ಕೆ ಮಾಡುವ ಬಗ್ಗೆ ಸಮಿತಿಯವರು ನಿರ್ಧರಿಸುವುದು.

VI. ಜನಸಂಖ್ಯಾ ಆಧಾರದ ಮೇಲೆ ಮೀಸಲಾತಿ :-

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಶೇ. 25 ರಷ್ಟು ಅಲ್ಪಸಂಖ್ಯಾತ ಸಮುದಾಯದ ಜನಸಂಖ್ಯೆ ಇರುವ ಪ್ರದೇಶದ ಅಂಗನವಾಡಿ ಕೇಂದ್ರಗಳಲ್ಲಿ ಕನ್ನಡ ಭಾಷೆಯೊಂದಿಗೆ ಆಯಾ ಅಲ್ಪಸಂಖ್ಯಾತ ಸಮುದಾಯದ ಭಾಷೆ ಬಲ್ಲವರನ್ನು ಕಾರ್ಯಕರ್ತೆ / ಸಹಾಯಕಿಯ ಹುದ್ದೆಗೆ ಆಯ್ಕೆ ಮಾಡುವುದು. ಅಂಗನವಾಡಿ ಕಾರ್ಯಕರ್ತೆ / ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಿದವರಲ್ಲಿ ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳು ಸಮಾನ ಅಂಕಗಳಿಸಿದ್ದಲ್ಲಿ ವಯೋಹಿರಿತನವನ್ನು ಪರಿಗಣಿಸಬೇಕು. ವಯಸ್ಸು ಸಮಾನವಾಗಿದ್ದಲ್ಲಿ ವಿಧವೆಯರನ್ನು ಪರಿಗಣಿಸಬೇಕು.

VII) ಅಂಗನವಾಡಿ ಕೇಂದ್ರಗಳ ವ್ಯಾಪ್ತಿ ಗುರುತಿಸುವಿಕೆ:

1. ಒಂದು ಗ್ರಾಮದಲ್ಲಿ ಈಗಾಗಲೇ ಅಂಗನವಾಡಿ ಕೇಂದ್ರವಿದ್ದು ಪುನಃ ಬೇಡಿಕೆಗೆ ಅನುಸಾರವಾಗಿ ಹೊಸ ಕೇಂದ್ರವನ್ನು ಪ್ರಾರಂಭಿಸುತ್ತಿದ್ದಲ್ಲಿ ಹೊಸ ಕೇಂದ್ರ ಪ್ರಾರಂಭಿಸುವ ಪ್ರದೇಶದ (ವ್ಯಾಪ್ತಿಯ) ಜನಸಂಖ್ಯೆಯಲ್ಲಿ ಶೇ. 40ಕ್ಕಿಂತ ಹೆಚ್ಚು ಜನಸಂಖ್ಯೆ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದವರಿದ್ದಲ್ಲಿ ಆ ಅಂಗನವಾಡಿ ಕೇಂದ್ರಕ್ಕೆ ಸದರಿ ವರ್ಗದವರಿಗೆ ಕಾರ್ಯಕರ್ತೆ/ಸಹಾಯಕಿ ಹುದ್ದೆಯನ್ನು ನಿಗದಿಪಡಿಸಿ ಪ್ರಕಟಣೆ ಹೊರಡಿಸಿ ಸದರಿ ಗ್ರಾಮ/ನಗರ ಪ್ರದೇಶದಲ್ಲಿ ಕಂದಾಯ ವಾರ್ಡ್‌ನಿಂದ ಅರ್ಜಿಗಳನ್ನು ಆಹ್ವಾನಿಸಿ ಆ ವರ್ಗದವರನ್ನೇ ಆಯ್ಕೆ ಮಾಡುವುದು.

assistants' in the state.! BIG NEWS : Compliance with these criteria is mandatory for selection of `Anganwadi workers
Share. Facebook Twitter LinkedIn WhatsApp Email

Related Posts

ALERT : ಅಪ್ಪಿತಪ್ಪಿಯೂ ಮೊಳಕೆಯೊಡೆದ `ಆಲೂಗಡ್ಡೆ’ ತಿನ್ನಬೇಡಿ : ಈ ಆರೋಗ್ಯ ಸಮಸ್ಯೆ ಬರಬಹುದು ಎಚ್ಚರ.!

11/12/2025 10:21 AM1 Min Read

BIG NEWS : ಜೈಲಿಂದ ಬಂದಮೇಲೆ ನಟ ದರ್ಶನ್ ರಾಜಕಾರಣಕ್ಕೆ ಎಂಟ್ರಿ?! : ಬಿಗ್ ಅಪ್ಡೇಟ್ ಕೊಟ್ಟ ಸಹೋದರ ದಿನಕರ್ ತೂಗುದೀಪ

11/12/2025 10:18 AM1 Min Read

BREAKING : ಚಿತ್ರದುರ್ಗದಲ್ಲಿ ಘೋರ ದುರಂತ : ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಕಾಲು ಜಾರಿ ಬಿದ್ದು ಇಬ್ಬರು ಯುವಕರ ಸಾವು!

11/12/2025 10:15 AM1 Min Read
Recent News

ಮ್ಯಾನ್ಮಾರ್ ಆಸ್ಪತ್ರೆಯ ಮೇಲೆ ವೈಮಾನಿಕ ದಾಳಿ: 31 ಜನರ ಧಾರುಣ ಸಾವು | Myanmar airstrike

11/12/2025 10:41 AM

BIG NEWS : ರಾಜ್ಯದಲ್ಲಿ `ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ’ ಆಯ್ಕೆಗೆ ಈ ಮಾನದಂಡಗಳ ಪಾಲನೆ ಕಡ್ಡಾಯ.!

11/12/2025 10:37 AM

New Labour codes: ನಿಮ್ಮ ಸಂಬಳಕ್ಕೆ ಧಕ್ಕೆಯಿಲ್ಲ! 15,000 ರೂ. ಪಿಎಫ್ ಮಿತಿಯಲ್ಲಿದ್ದರೆ ಹೊಸ ಲೇಬರ್ ಕೋಡ್‌ಗಳಿಂದ ಕಡಿತವಿಲ್ಲ!

11/12/2025 10:34 AM

ALERT : ಅಪ್ಪಿತಪ್ಪಿಯೂ ಮೊಳಕೆಯೊಡೆದ `ಆಲೂಗಡ್ಡೆ’ ತಿನ್ನಬೇಡಿ : ಈ ಆರೋಗ್ಯ ಸಮಸ್ಯೆ ಬರಬಹುದು ಎಚ್ಚರ.!

11/12/2025 10:21 AM
State News
KARNATAKA

BIG NEWS : ರಾಜ್ಯದಲ್ಲಿ `ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ’ ಆಯ್ಕೆಗೆ ಈ ಮಾನದಂಡಗಳ ಪಾಲನೆ ಕಡ್ಡಾಯ.!

By kannadanewsnow5711/12/2025 10:37 AM KARNATAKA 3 Mins Read

ಬೆಂಗಳೂರು : ರಾಜ್ಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಆಯ್ಕೆ ಮಾಡಲು ಈ ಮಾನದಂಡಗಳ ಪಾಲನೆ ಕಡ್ಡಾಯವಾಗಿದೆ. ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ…

ALERT : ಅಪ್ಪಿತಪ್ಪಿಯೂ ಮೊಳಕೆಯೊಡೆದ `ಆಲೂಗಡ್ಡೆ’ ತಿನ್ನಬೇಡಿ : ಈ ಆರೋಗ್ಯ ಸಮಸ್ಯೆ ಬರಬಹುದು ಎಚ್ಚರ.!

11/12/2025 10:21 AM

BIG NEWS : ಜೈಲಿಂದ ಬಂದಮೇಲೆ ನಟ ದರ್ಶನ್ ರಾಜಕಾರಣಕ್ಕೆ ಎಂಟ್ರಿ?! : ಬಿಗ್ ಅಪ್ಡೇಟ್ ಕೊಟ್ಟ ಸಹೋದರ ದಿನಕರ್ ತೂಗುದೀಪ

11/12/2025 10:18 AM

BREAKING : ಚಿತ್ರದುರ್ಗದಲ್ಲಿ ಘೋರ ದುರಂತ : ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಕಾಲು ಜಾರಿ ಬಿದ್ದು ಇಬ್ಬರು ಯುವಕರ ಸಾವು!

11/12/2025 10:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.