ಬೆಂಗಳೂರು : ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ಇಂದು ಬಿಜೆಪಿ 18 ಶಾಸಕರನ್ನು ಆರು ತಿಂಗಳುಗಳ ಕಾಲ ವಿಧಾನಸಭೆಯಿಂದ ಅಮಾನತು ಮಾಡಿ ಸ್ಪೀಕರ್ ಯುಟಿ ಖಾದರ್ ಆದೇಶಿಸಿದರು.ಈ ಕುರಿತು ಅಮಾನತು ಶಾಸಕ ಅಶ್ವಥ್ ನಾರಾಯಣ್ ಕಾನೂನನ್ನು ನಾವು ಕೈಗೆ ತೆಗೆದುಕೊಂಡಿಲ್ಲ ಹೊಡೆದಾಟ ಮಾಡಿಲ್ಲ ಕೂಡಲೇ ಅಮಾನತು ಆದೇಶ ಹಿಂಪಡೆಯಬೇಕು ಎಂದು ಬೆಂಗಳೂರಿನಲ್ಲಿ ಶಾಸಕ ಅಶ್ವತ್ ನಾರಾಯಣ್ ಆಗ್ರಹಿಸಿದರು.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್ ಬಗ್ಗೆ ದಲಿತ ಸಚಿವರು ಅಳಲು ತೋಡಿಕೊಂಡಿದ್ದಾರೆ. ಈ ಬಗ್ಗೆ ಕೂಡಲೇ ಸಿಟ್ಟಿಂಗ್ ಜಡ್ಜ್ ಮೂಲಕವೇ ತನಿಖೆ ಮಾಡಿಸಬೇಕು. ಕಾಂಗ್ರೆಸ್ ಸರ್ಕಾರದಲ್ಲಿ ಮನಬಂದಂತೆ ಆಡಳಿತ ನಡೆಸುತ್ತಿದ್ದಾರೆ. ಸೆಕ್ಸ್ ಸ್ಕ್ಯಾಂಡಲ್ ನಲ್ಲಿ ಸರ್ಕಾರ ತೊಡಗಿದೆ ಅಲ್ಲದೆ ಸಂವಿಧಾನದ ವಿರುದ್ಧವಾಗಿ ಮೀಸಲಾತಿ ನೀಡಲಾಗಿದೆ ಎಂದು ಕಿಡಿ ಕಾರಿದರು.
ಅಧಿಕಾರ ದುರುಪಯೋಗ ಮಾಡಿಕೊಳ್ಳಲಾಗಿದೆ. ಕಾನೂನು ಬದ್ಧವಾಗಿ ನಾವು ಸದನದಲ್ಲಿ ಪ್ರತಿಭಟನೆ ಮಾಡಿದ್ದೇವೆ. ಆದರೆ ನಮ್ಮನ್ನು 6 ತಿಂಗಳ ಕಾಲ ಅಮಾನತು ಮಾಡಿದ್ದಾರೆ. ನಾವೇನು ಯಾರನ್ನು ತಳ್ಳಿಲ್ಲ, ಪೇಪರ್ ಎರಚಿಲ್ಲ. ಪ್ರತಿಭಟನೆ ಮಾಡುವುದು ನಮ್ಮ ಹಕ್ಕು ಅಮಾನತು ಆದೇಶ ಹಿಂಪಡೆದು ಸಂವಿಧಾನಕ್ಕೆ ಗೌರವ ನೀಡಬೇಕು ಎಂದು ಬೆಂಗಳೂರಿನಲ್ಲಿ ಶಾಸಕ ಅಶ್ವತ್ ನಾರಾಯಣ್ ಆಗ್ರಹಿಸಿದರು.