Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಮೆರಿಕದ ಕಣ್ಗಾವಲು ವ್ಯವಸ್ಥೆಗೆ ಬಲವಾದ ಪೆಟ್ಟು: ಗಲ್ಫ್‌ನಲ್ಲಿ ಇರಾನ್‌ನಿಂದ ಹೈಟೆಕ್ ರೇಡಾರ್ ಧ್ವಂಸ

03/03/2026 7:34 PM

BREAKING : ಇರಾನ್’ನಲ್ಲಿ ನೂತನವಾಗಿ ನೇಮಕಗೊಂಡ ರಕ್ಷಣಾ ಸಚಿವ ‘ಮಜೀದ್’ ಇಸ್ರೇಲ್ ದಾಳಿಯಲ್ಲಿ ಸಾವು

03/03/2026 7:14 PM

BREAKING : ‘ಕಾಲ ಮಿಂಚಿ ಹೋಗಿದೆ’ ; ಇರಾನ್ ಜೊತೆ ಮಾತುಕತೆ ನಿರಾಕರಿಸಿದ ಅಮೆರಿಕಾ ಅಧ್ಯಕ್ಷ ‘ಟ್ರಂಪ್’

03/03/2026 7:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ದಲಿತರನ್ನು ತುಳಿದವರೇ ಕಾಂಗ್ರೆಸ್‌ನವರು, ಜಾತಿ ಗಣತಿ ವೈಜ್ಞಾನಿಕವಾಗಿ ಆಗಿಲ್ಲ : ಪ್ರತಿಪಕ್ಷ ನಾಯಕ ಆರ್‌.ಅಶೋಕ
KARNATAKA

BIG NEWS : ದಲಿತರನ್ನು ತುಳಿದವರೇ ಕಾಂಗ್ರೆಸ್‌ನವರು, ಜಾತಿ ಗಣತಿ ವೈಜ್ಞಾನಿಕವಾಗಿ ಆಗಿಲ್ಲ : ಪ್ರತಿಪಕ್ಷ ನಾಯಕ ಆರ್‌.ಅಶೋಕ

By kannadanewsnow5711/04/2025 12:34 PM

ಬೆಂಗಳೂರು : ಕಾಂಗ್ರೆಸ್‌ನವರು ಹಲವಾರು ವರ್ಷಗಳ ಕಾಲ ದಲಿತರನ್ನು ತುಳಿದುಕೊಂಡೇ ಬಂದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ವಿಧಾನಸೌಧದ ಡಾ.ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆ ಬಳಿ “ಭೀಮ ಹೆಜ್ಜೆ 100 ರ ಸಂಭ್ರಮ” ಕಾರ್ಯಕ್ರಮದ ಉದ್ಘಾಟನೆಯಲ್ಲಿ ಅವರು ಪಾಲ್ಗೊಂಡು ಮಾತನಾಡಿದರು. ದಲಿತರ ಬಗ್ಗೆ ಮಾತಾಡುವಾಗಲೆಲ್ಲ ಅವರು ತುಳಿತಕ್ಕೆ ಒಳಗಾದವರು ಎಂದು ಹೇಳುತ್ತೇವೆ. ಆದರೆ ಈ ರೀತಿ ತುಳಿದವರು ಯಾರು ಎಂದು ಪ್ರಶ್ನೆ ಮಾಡಿದರೆ, ಕಾಂಗ್ರೆಸ್‌ನವರೇ ಎಂಬ ಉತ್ತರ ಸಿಗುತ್ತದೆ. ಇಷ್ಟು ವರ್ಷಶೋಷಿತರನ್ನು ಕಾಂಗ್ರೆಸ್‌ನವರೇ ತುಳಿದಿದ್ದಾರೆ. ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಕಾಂಗ್ರೆಸ್‌ನ ಕಳ್ಳರು ದಲಿತರನ್ನು ಉದ್ಧಾರ ಮಾಡಲಿಲ್ಲ ಎಂದರು.

ಬಾಬಾ ಸಾಹೇಬ್‌ ಅಂಬೇಡ್ಕರ್‌ರ ಹೆಸರನ್ನು ಕಾಂಗ್ರೆಸ್‌ನವರು ದುರುಪಯೋಗ ಮಾಡಿಕೊಂಡರು. ನರೇಂದ್ರ ಮೋದಿ ಪ್ರಧಾನಿಯಾದ ಬಳಿ ಅಂಬೇಡ್ಕರರ ಜೀವನದ ಪ್ರಮುಖ ಸ್ಥಳಗಳನ್ನು ಪಂಚತೀರ್ಥವೆಂದು ಯಾತ್ರಾ ಸ್ಥಳವಾಗಿಸಿದರು. ಕಾಂಗ್ರೆಸ್‌ ನಾಯಕರು ತಾವು ದಲಿತರ ಪರ ಎಂದು ಹೇಳುತ್ತಾರೆ. ಆದರೆ ದಲಿತರಿಗೆ ಮೋಸ ಮಾಡುತ್ತಾರೆ ಎಂದು ದೂರಿದರು.

ವಕ್ಫ್‌ ಮಂಡಳಿ ಲಕ್ಷಾಂತರ ದಲಿತರ ಆಸ್ತಿಗಳನ್ನು ಲೂಟಿ ಮಾಡಿದೆ. ವಕ್ಫ್‌ನಿಂದಾದ ಭೂ ಕಬಳಿಕೆ ಬಗ್ಗೆ ನಾನು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾಗ, ದೂರು ಹೇಳಿಕೊಳ್ಳಲು ಬರುತ್ತಿದ್ದವರಲ್ಲಿ ದಲಿತರೇ ಹೆಚ್ಚಿನ ಸಂಖ್ಯೆಯಲ್ಲಿರುತ್ತಿದ್ದರು. ಸಂಸತ್ತಿನಲ್ಲಿ ವಕ್ಫ್‌ ತಿದ್ದುಪಡಿ ಮಸೂದೆಗೆ ವಿರುದ್ಧವಾಗಿ ಕಾಂಗ್ರೆಸ್‌ ನಿಂತುಕೊಳ್ಳುತ್ತದೆ ಎಂಬುದರಲ್ಲೇ ಅವರ ದಲಿತರ ಕಾಳಜಿ ಅರ್ಥವಾಗುತ್ತದೆ. ಸಂವಿಧಾನ ಉಳಿಯಬೇಕು, ಕಾಂಗ್ರೆಸ್‌ನ ಪೊಳ್ಳು ಭರವಸೆಗಳು ಹೋಗಬೇಕು ಎಂದರು.

ಜಾತಿ ಗಣತಿ ವೈಜ್ಞಾನಿಕವಲ್ಲ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿಯಲ್ಲಿ ಸಮೀಕ್ಷೆ ಮಾಡಿದ್ದವರು ಎಲ್ಲರ ಮನೆಗೆ ಹೋಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿ ಮಾಡಿಸಿರುವ ವರದಿ. ಇದರಲ್ಲಿ ರಾಜಕೀಯ ಇರುವುದರಿಂದ ಇದನ್ನು ಯಾರೂ ಒಪ್ಪಲ್ಲ. ನಾನು ಕೂಡ ಜಾತಿ ಗಣತಿ ಆಗಬೇಕು ಎನ್ನುತ್ತೇನೆ. ಆದರೆ ಯಾರಿಗೋ ಅನುಕೂಲ ಮಾಡಿಕೊಡಲು ಜಾತಿಜಾತಿಗಳ ನಡುವೆ ವಿಷಬೀಜ ಬಿತ್ತಲು ಈ ವರದಿ ರೂಪಿಸಲಾಗಿದೆ. ಕಾಂಗ್ರೆಸ್‌ಗೆ ಇದೇ ಬೇಕಾಗಿದೆ ಎಂದರು.

ಗುತ್ತಿಗೆದಾರರು ಕಮಿಶನ್‌ ಆರೋಪ ಮಾಡಿದ್ದು, ಈ ಬಗ್ಗೆ ಕಾಂಗ್ರೆಸ್‌ ನಾಯಕರು ಸಭೆ ಮಾಡಿ ಚರ್ಚಿಸಲಿ. ಯಾವ ಖಾತೆಗಳಲ್ಲಿ ಎಷ್ಟು ಲೂಟಿ ನಡೆಯುತ್ತಿದೆ ಎಂದು ಹೇಳಿದ್ದಾರೆ. ಕಮಿಶನ್‌ ಕೊಡುವವರಿಗೆ ಬಿಲ್‌ ಪಾವತಿಯಾಗುತ್ತದೆ. ಅಬಕಾರಿ ಇಲಾಖೆಯಲ್ಲಿ ಸಚಿವರ ಮಗ ಲೂಟಿ ಮಾಡುತ್ತಿದ್ದಾರೆ. ಸಚಿವರ ಮೇಲೆ ಇಷ್ಟೆಲ್ಲ ಆರೋಪ ಬಂದರೂ ಸಿಎಂ ಸಿದ್ದರಾಮಯ್ಯ ಸಮರ್ಥನೆ ಮಾಡಿಕೊಳ್ಳುತ್ತಾರೆ. ಭ್ರಷ್ಟಾಚಾರವೇ ನಮ್ಮ ಬಂಧು ಬಳಗ ಎಂದು ಕಾಂಗ್ರೆಸ್‌ ಘೋಷಣೆ ಮಾಡಿಕೊಳ್ಳಬೇಕು. ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದೇ ಇರಲು ಕಮಿಶನ್‌ ವಸೂಲಿ ಮಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್‌ ಸಿಎಂ ಆಗಲು ಕಮಿಶನ್‌ ಸಂಗ್ರಹಿಸುತ್ತಿದ್ದಾರೆ. ಸಚಿವರು ಕೂಡ ಸಿಎಂ ಆಗಲು ಕಮಿಶನ್‌ ಮಾಡುತ್ತಿದ್ದಾರೆ. ವಿಧಾನಸೌಧದ ಸಚಿವರ ಕಚೇರಿಗಳು ಕಲೆಕ್ಷನ್‌ ಸೆಂಟರ್‌ ಆಗಿದೆ. ಜೊತೆಗೆ ಜನರ ಮೇಲೆ 80 ಸಾವಿರ ಕೋಟಿ ರೂ. ತೆರಿಗೆ ಹಾಕಿದ್ದಾರೆ ಎಂದು ದೂರಿದರು.

ಜೆಡಿಎಸ್‌ನ ಹೋರಾಟಕ್ಕೆ ಬಿಜೆಪಿಯ ಸಂಪೂರ್ಣ ಬೆಂಬಲವಿದೆ. ಯಾವ ಹೋರಾಟ ಒಟ್ಟಿಗೆ ಮಾಡಬೇಕು, ಪ್ರತ್ಯೇಕ ಮಾಡಬೇಕೆಂದು ಎಚ್‌.ಡಿ.ಕುಮಾರಸ್ವಾಮಿ ಜೊತೆ ಚರ್ಚಿಸಲಾಗುವುದು. ನಮ್ಮ ಅವರ ನಡುವಿನ ಬಾಂಧವ್ಯಕ್ಕೆ ಯಾರೂ ಹುಳಿ ಹಿಂಡಲು ಸಾಧ್ಯವೇ ಇಲ್ಲ ಎಂದರು.

BIG NEWS: Congress is the one who oppressed Dalits caste census was not done scientifically: Opposition Leader R. Ashoka
Share. Facebook Twitter LinkedIn WhatsApp Email

Related Posts

ಇಂದಿನ ಚಂದ್ರಗ್ರಹಣದ ಬಳಿಕ ಈ ರಾಶಿಗೆ ಅದೃಷ್ಟವೋ ಅದೃಷ್ಟ! | Lunar Eclipse

03/03/2026 7:06 PM4 Mins Read
kh muniyappa on reservation

ಬ್ರೇಕಿಂಗ್ : ಸಿದ್ದರಾಮಯ್ಯ ಸರ್ಕಾರಕ್ಕೆ ‘ಒಳಮೀಸಲಾತಿ’ ಶಾಕ್! ಸಚಿವ ಸ್ಥಾನಕ್ಕೆ ಕೆ.ಹೆಚ್. ಮುನಿಯಪ್ಪ ರಾಜೀನಾಮೆ ಎಚ್ಚರಿಕೆ?

03/03/2026 6:47 PM2 Mins Read

ರಾಜ್ಯದ ರೈತರಿಗೆ ಗುಡ್‌ ನ್ಯೂಸ್: ಇನ್ಮುಂದೆ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಸರ್ಕಾರ

03/03/2026 6:45 PM5 Mins Read
Recent News

ಅಮೆರಿಕದ ಕಣ್ಗಾವಲು ವ್ಯವಸ್ಥೆಗೆ ಬಲವಾದ ಪೆಟ್ಟು: ಗಲ್ಫ್‌ನಲ್ಲಿ ಇರಾನ್‌ನಿಂದ ಹೈಟೆಕ್ ರೇಡಾರ್ ಧ್ವಂಸ

03/03/2026 7:34 PM

BREAKING : ಇರಾನ್’ನಲ್ಲಿ ನೂತನವಾಗಿ ನೇಮಕಗೊಂಡ ರಕ್ಷಣಾ ಸಚಿವ ‘ಮಜೀದ್’ ಇಸ್ರೇಲ್ ದಾಳಿಯಲ್ಲಿ ಸಾವು

03/03/2026 7:14 PM

BREAKING : ‘ಕಾಲ ಮಿಂಚಿ ಹೋಗಿದೆ’ ; ಇರಾನ್ ಜೊತೆ ಮಾತುಕತೆ ನಿರಾಕರಿಸಿದ ಅಮೆರಿಕಾ ಅಧ್ಯಕ್ಷ ‘ಟ್ರಂಪ್’

03/03/2026 7:06 PM

ಇಂದಿನ ಚಂದ್ರಗ್ರಹಣದ ಬಳಿಕ ಈ ರಾಶಿಗೆ ಅದೃಷ್ಟವೋ ಅದೃಷ್ಟ! | Lunar Eclipse

03/03/2026 7:06 PM
State News
KARNATAKA

ಇಂದಿನ ಚಂದ್ರಗ್ರಹಣದ ಬಳಿಕ ಈ ರಾಶಿಗೆ ಅದೃಷ್ಟವೋ ಅದೃಷ್ಟ! | Lunar Eclipse

By kannadanewsnow0903/03/2026 7:06 PM KARNATAKA 4 Mins Read

ಈ ವರ್ಷದ ಮೊದಲ ಚಂದ್ರಗ್ರಹಣವು ಫಾಲ್ಗುಣ ಮಾಸದ ಹುಣ್ಣಿಮೆಯಂದು ಅಂದರೆ ಮಾರ್ಚ್ 03 ರಂದು ಸಂಭವಿಸಲಿದೆ. ಈ ಚಂದ್ರಗ್ರಹಣವು ಭಾರತದಲ್ಲಿ…

kh muniyappa on reservation

ಬ್ರೇಕಿಂಗ್ : ಸಿದ್ದರಾಮಯ್ಯ ಸರ್ಕಾರಕ್ಕೆ ‘ಒಳಮೀಸಲಾತಿ’ ಶಾಕ್! ಸಚಿವ ಸ್ಥಾನಕ್ಕೆ ಕೆ.ಹೆಚ್. ಮುನಿಯಪ್ಪ ರಾಜೀನಾಮೆ ಎಚ್ಚರಿಕೆ?

03/03/2026 6:47 PM

ರಾಜ್ಯದ ರೈತರಿಗೆ ಗುಡ್‌ ನ್ಯೂಸ್: ಇನ್ಮುಂದೆ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಸರ್ಕಾರ

03/03/2026 6:45 PM

ಪುರುಷರೇ ಗಮನಿಸಿ : ಸದೃಢ ‘ಸ್ಪರ್ಮ್‌’ಗಾಗಿ ಈ 3 ವಿಟಮಿನ್‌ ಗಳು ಅತ್ಯಗತ್ಯ!

03/03/2026 6:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.