ಬೆಂಗಳೂರು : ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿರುವ ವಿಚಾರ ಎಲ್ಲರಿಗೂ ಗೊತ್ತಿರುವ ಸಂಗತಿಯಾಗಿದೆ.ಆದರೆ ಇದೀಗ ಇನ್ನೊಂದು ಹೆಜ್ಜೆ ಮುಂದೆ ಹೋಗಿ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ಬರ ಪರಿಹಾರವಾಗಿ ದೂರು ಸಲ್ಲಿಸಿದೆ ಎಂದು ತಿಳಿದು ಬಂದಿದೆ.ಸುಪ್ರೀಂ ಮೆಟ್ಟಿಲೇರಿರುವ ಕಾಂಗ್ರೆಸ್ ಇದೀಗ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರ ಹೇಳಿಕೆಯನ್ನು ಇಟ್ಟುಕೊಂಡು ಕಾಂಗ್ರೆಸ್ ಈಗ ಚುನಾವಣೆ ಆಯೋಗದ ಮೆಟ್ಟಿಲೇರಿದೆ.
ಹೌದು ಬರ ಪರಿಹಾರ ಬಿಡುಗಡೆಗೆ ಲೋಕಸಭೆ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗಿದೆ ಎಂದು ಕೇಂದ್ರ ಸಚಿವರಾದ ಅಮಿತ್ ಶಾ ಹಾಗೂ ನಿರ್ಮಲಾ ಸೀತಾರಾಮನ್ ಹೇಳಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಮಾಜಿ ಸಂಸದ ಉಗ್ರಪ್ಪ ನೇತೃತ್ವದ ನಿಯೋಗ ಇಂದು ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ ತೆರಳಿ ದೂರು ನೀಡಿದ್ದು, ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಎಂದು ಕಾಂಗ್ರೆಸ್ ಆಯೋಗಕ್ಕೆ ದೂರು ನೀಡಿದೆ.
ಬರ ಪರಿಹಾರ ಕೊಡುವ ವಿಚಾರದಲ್ಲಿ ಚುನಾವಣಾ ಆಯೋಗದ ನೀತಿ ಸಂಹಿತೆ ಅಡ್ಡಿಯಾಗಿದೆ. ಬರ ಪರಿಹಾರ ನೀಡಲು ಹೈಪವರ್ ಕಮಿಟಿ ಸಭೆ ನಡೆಯಬೇಕು. ಸಭೆ ನಡೆಸಲು ಚುನಾವಣಾ ಆಯೋಗ ಅನುಮತಿ ನೀಡಿಲ್ಲ. ಈ ಬಗ್ಗೆ ನಾವು ಪತ್ರ ಬರೆದಿದ್ದೇವೆ. ಆದರೆ ಚುನಾವಣಾ ಆಯೋಗ ಅನುಮತಿ ನೀಡಿಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಆದರೆ ಕಾನೂನಿನಲ್ಲಿ ಬರ ಪರಿಹಾರ ಕೊಡುವ ಅವಕಾಶ ಇದ್ದರೂ ಸಹ ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೇಲೆ ಹೇಳುತ್ತಿದೆ. ಹೀಗಾಗಿ ಹೈಪವರ್ ಕಮಿಟಿ ಮೀಟಿಂಗ್ ಮಾಡಲು ಚುನಾವಣಾ ಆಯೋಗ ನಿರ್ದೇಶನ ನೀಡಬೇಕು. ಅಲ್ಲದೇ ತಕ್ಷಣವೇ ಬರ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕಾಂಗ್ರೆಸ್ ತನ್ನ ದೂರಿನಲ್ಲಿ ಮನವಿ ಮಾಡಿದೆ.