ಬೆಂಗಳೂರು : ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್ ನಾಯಕರು ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ, ರಾಜಭವನ ಚಲೋ ನಡೆಸಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಮನರೇಗಾ ಹೆಸರು ಬದಲಾವಣೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮನರೇಗಾ ಹೆಸರು ಮರು ಸ್ಥಾಪನೆ ಮಾಡುವವರೆಗೂ ಹೋರಾಟ ಮುಂದುವರೆಯಲಿದೆ ಎಂದು ಎಚ್ಚರಿಸಿದ್ದಾರೆ.
ಬೃಹತ್ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕಾಂಗ್ರೆಸ್ ಸಚಿವರು, ಶಾಸಕರು, ಪದಾಧಿಕಾರಿಗಳು, ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದಾರೆ. ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಬಳಿಕ ರಾಜಭವನ ಚಲೋ ನಡೆಸಿದ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಬಸ್ ಗಳಲ್ಲಿ ಲೋಕಭವನಕ್ಕೆ ತೆರಳಿದರು.
ಕೇಂದ್ರ ಸರ್ಕಾರ ಜಾರಿ ಮಾಡಿರುವ ಮನ್ ರೇಗಾ ಯೋಜನೆ ಮರು ಸ್ಥಾಪನೆಗೆ ಆಗ್ರಹಿಸಿ ಇದೀಗ ದೂರು ನೀಡಿದ್ದಾರೆ. ರಾಜ್ಯಪಾಲರಿಗೆ ಕಾಂಗ್ರೆಸ್ ನಾಯಕರು ಇಂದು ರಾಜಭವನಕ್ಕೆ ತೆರಳಿ ರಾಜ್ಯಪಾಲ ಗೆಹ್ಲೊಟ್ ಅವರಿಗೆ ದೂರು ನೀಡಿದರು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದ ಸುರಜವಾಲ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ದೂರು ಸಲ್ಲಿಸಿದರು.








