ಬೆಂಗಳೂರು : ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಅವರು ಮಾತನಾಡಿ, ದೇಶದ ಭದ್ರತೆ ವಿಚಾರದಲ್ಲಿ ಕಾಂಗ್ರೆಸ್ ಮಾಡಿದ ತ್ಯಾಗ ಬಹಳ ದೊಡ್ಡದು ಎಂದು ಅವರು ತಿಳಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ದೇಶದ ಭದ್ರತೆಗೆ ಮಾಡಿದ್ದಷ್ಟು ತ್ಯಾಗ ಯಾರು ಮಾಡಿಲ್ಲ. ಆ ಬಗ್ಗೆ ನಾವು ಬೇರೆಯವರಿಂದ ಪಾಠ ಹೇಳಿಸಿಕೊಳ್ಳುವ ಅಗತ್ಯ ಇಲ್ಲ. ನಾವೇನು ಪಹಲ್ಗಾಮ್ ದುರ್ಘಟನೆಯ ಬಗ್ಗೆ ಮೃದು ಧೋರಣೆ ತೋರಿಲ್ಲ ಎಂದು ಅವರು ತಿಳಿಸಿದರು.
ನಮ್ಮ ನಾಯಕರು ಸರ್ವ ಪಕ್ಷದ ಸಭೆಯಲ್ಲಿ ಅಭಿಪ್ರಾಯ ಹೇಳಿದ್ದಾರೆ. ಇದು ದೇಶದ ಭದ್ರತೆಯ ವಿಚಾರ ಎಚ್ಚರಿಕೆಯಿಂದ ಮಾತನಾಡಬೇಕು. ಈ ವಿಚಾರದಲ್ಲಿ ಪಕ್ಷಾತೀತವಾಗಿ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದರು.