ಬೆಂಗಳೂರು : ಲೋಕಸಭಾ ಚುನಾವಣೆಗೆ ಈಗಾಗಲೇ ನಿನ್ನೆ ಚುನಾವಣಾ ಆಯೋಗ ದಿನಾಂಕ ಮಾಡಿದ್ದು ಅದಕ್ಕೂ ಮುನ್ನ ಬಿಜೆಪಿ ಮೊದಲು, ಎರಡನೇ ಪಟ್ಟೆ ಬಿಡುಗಡೆ ಮಾಡಿದ್ದು, ಕಾಂಗ್ರೆಸ್ ಕೂಡ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು ಇದೀಗ ಮಾರ್ಚ್ 20ರಂದು ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಲಿದೆ ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.
ರೈಲ್ವೆ ಪ್ರಯಾಣಿಕರೇ ಗಮನಿಸಿ: ಹುಬ್ಬಳ್ಳಿ-ರಾಮೇಶ್ವರಂ ನಡುವೆ ಸಾಪ್ತಾಹಿಕ ವಿಶೇಷ ರೈಲು ಸಂಚಾರ
ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಮಾರ್ಚ್ 19 ರಂದು ಸಭೆ ಇದೆ ಅಂದೆ ಅಭ್ಯರ್ಥಿಗಳ ಪಟ್ಟಿ ಕುರಿತು ತೀರ್ಮಾನಿಸುತ್ತೇವೆ ಆದರೆ ನಾವು ಎರಡನೇ ಪಟ್ಟಿಯನ್ನು ಮಾರ್ಚ್ 20 ಮಾಡುತ್ತೇವೆ ಎಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಮ್ಮ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅಂದರೆ ಭಯ ಹಾಗಾಗಿ ಅವರು ಚುನಾವಣಾ ಪ್ರಚಾರವನ್ನು ಅಲ್ಲಿಂದಲೇ ಆರಂಭಿಸಿದ್ದಾರೆ. ಕಲ್ಬುರ್ಗಿ ಸೇರಿದಂತೆ ರಾಜ್ಯದಲ್ಲಿ 20 ಕ್ಷೇತ್ರವನ್ನು ಕಾಂಗ್ರೆಸ್ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವ್ಯಕ್ತಪಡಿಸಿದರು