Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ಸೊರಬದ ಉಳವಿಯ ‘KPS ಶಾಲೆ’ಗೆ 2026-27ನೇ ಸಾಲಿನ ಪ್ರೌಢಶಾಲಾ ದಾಖಲಾತಿ ಆರಂಭ

16/04/2026 9:39 PM

BREAKING: ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ಮುಂದುವರಿಸಿ ಸರ್ಕಾರದ ಅಧಿಕೃತ ಆದೇಶ

16/04/2026 9:28 PM

BREAKING: ಇಸ್ರೇಲ್-ಲೆಬನಾನ್ ನಡುವೆ 10 ದಿನಗಳ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರಂಪ್

16/04/2026 9:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ತುಳು’ 2 ನೇ ರಾಜ್ಯ ಭಾಷೆಯನ್ನಾಗಿ ಪರಿಗಣಿಸುವ ಬಗ್ಗೆ ಪರಿಶೀಲನೆ : CM ಸಿದ್ದರಾಮಯ್ಯ
KARNATAKA

BIG NEWS : `ತುಳು’ 2 ನೇ ರಾಜ್ಯ ಭಾಷೆಯನ್ನಾಗಿ ಪರಿಗಣಿಸುವ ಬಗ್ಗೆ ಪರಿಶೀಲನೆ : CM ಸಿದ್ದರಾಮಯ್ಯ

By kannadanewsnow5712/01/2025 5:50 AM

ಮಂಗಳೂರು : ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರ ಬೇಡಿಕೆಯಂತೆ ತುಳು ಭಾಷೆಯನ್ನು ಎರಡನೇ ರಾಜ್ಯ ಭಾಷೆಯನ್ನಾಗಿ ಪರಿಗಣಿಸುವ ಬಗ್ಗೆ ಗಂಭೀರವಾಗಿ ಚಿಂತಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಉಳ್ಳಾಲ ನರಿಂಗಾನದ ಮೂರನೇ ವರ್ಷದ ಲವ-ಕುಶ ಜೋಡುಕೆರೆ ಕಂಬಳೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ. ಇದು ಸರ್ವರ ಸಂಭ್ರಮ.‌ ನಮ್ಮ ದೇಶ ಬಹುತ್ವದ ದೇಶ‌. ಜನಪದ ಕ್ರೀಡೆ ಕಂಬಳ ಸರ್ವ ಜಾತಿ ಧರ್ಮದ ಜನಸಮುದಾಯವನ್ನು ಬೆಸೆಯುವಂತೆ ಮಾಡುತ್ತಿದೆ. ನಮ್ಮ ಸರ್ಕಾರ ಕೂಡ ಎಲ್ಲಾ ಜಾತಿ, ಎಲ್ಲಾ ಧರ್ಮದ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಮಹಿಳೆಯರಿಗೆ ಆರ್ಥಿಕ ಶಕ್ತಿ ಕೊಡುವ ಮೂಲಕ‌ ಕುಟುಂಬಗಳ ಮತ್ತು ಮಹಿಳಾ ಸಮಾಜದ ಆರ್ಥಿಕ‌ ಶಕ್ತಿಯನ್ನು ಹೆಚ್ಚಿಸುವ ಕಾರ್ಯಕ್ರಮಗಳನ್ನು ಇಡೀ ದೇಶದಲ್ಲಿ ಮೊದಲಿಗೆ ಕೊಟ್ಟಿದ್ದು ನಮ್ಮ ಸರ್ಕಾರ ಎಂದು ಹೇಳಿದರು.

ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಿ ಅವರು ಪ್ರತಿಭಟನೆ ಹಿಂತೆಗೆದುಕೊಳ್ಳುವಂತೆ ಮಾಡಿದ್ದು ನಮ್ಮ ಸರ್ಕಾರ. ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ 10 ಸಾವಿರ ರೂ. ಸಿಗುವಂತೆ ಮಾಡುವ ಜವಾಬ್ದಾರಿಯನ್ನು ನಮ್ಮ ಸರ್ಕಾರ ವಹಿಸಿಕೊಂಡಿದೆ ಎಂದರು.

ಸುಪ್ರೀಂಕೋರ್ಟ್ ನಿಷೇಧಿಸಿದ್ದ ಕಂಬಳ ಕ್ರೀಡೆಗೆ ಮರು ಚಾಲನೆ ಸಿಗುವಂತೆ ಮಾಡಿದ್ದು ನಮ್ಮ ಸರ್ಕಾರ. ಸುಪ್ರೀಂಕೋರ್ಟ್ ನಿಷೇಧವನ್ನು ತೆರವುಗೊಳಿಸಲು ನಮ್ಮ ಸರ್ಕಾರ ಶ್ರಮಿಸಿತು. ಇದು ಕರಾವಳಿಯ ಜನಪದ ಸಂಸ್ಕೃತಿಗೆ ನಮ್ಮ ಸರ್ಕಾರ ಕೊಟ್ಟ ಕೊಡುಗೆ. ತಮ್ಮ ಮನೆ ಮಕ್ಕಳಂತೆ ಕೋಣಗಳನ್ನು ಸಾಕುತ್ತಾರೆ. ಕಂಬಳ ಕ್ರೀಡೆ ಜಿಲ್ಲೆಯ ಜನಪದ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಹೀಗಾಗಿ ಈ ಸಾಂಪ್ರದಾಯಿಕ ಕ್ರೀಡೆಯನ್ನು ಉಳಿಸಲು ನಾನು ಮುಂದಾದೆ. 24 ಕಂಬಳಗಳನ್ನು ನಡೆಸಲು ಪ್ರತೀ ಕಂಬಳಕ್ಕೆ ತಲಾ 5 ಲಕ್ಷ ರೂಪಾಯಿ ನೆರವನ್ನು ನಮ್ಮ ಸರ್ಕಾರ ನೀಡಿದೆ ಎಂದು ತಿಳಿಸಿದರು.

ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರ ಬೇಡಿಕೆಯಂತೆ ತುಳು ಭಾಷೆಯನ್ನು ಎರಡನೇ ರಾಜ್ಯ ಭಾಷೆಯನ್ನಾಗಿ ಪರಿಗಣಿಸುವ ಬಗ್ಗೆ ಗಂಭೀರವಾಗಿ ಚಿಂತಿಸಲಾಗುವುದು. ಐದು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಯು.ಟಿ.ಖಾದರ್ ಅವರು ಸ್ಪೀಕರ್ ಆಗುವ ಮೂಲಕ ಪ್ರೋಟೋಕಾಲ್ ಪ್ರಕಾರ ನನಗಿಂತ ಎತ್ತರದಲ್ಲಿದ್ದಾರೆ. ಮುಂದೆ ಇದಕ್ಕಿಂತ ಒಳ್ಳೆಯ ಅವಕಾಶಗಳು ಸಿಗಬಹುದು. ರಾಜಕಾರಣದಲ್ಲಿ ಯಾವುದೂ ಶಾಶ್ವತ ಅಲ್ಲ. ಯು.ಟಿ.ಖಾದರ್ ಅವರು ಸ್ಪೀಕರ್ ಆದ ಬಳಿಕ ತಮ್ಮ ಕ್ಷೇತ್ರದ ಅಭಿವೃದ್ಧಿಗೆ ₹1,000 ಕೋಟಿಯಷ್ಟು ಅನುದಾನ ತಂದಿದ್ದಾರೆ. ಕ್ಷೇತ್ರದ ಬಗ್ಗೆ ಅವರಿಗೆ ಅಷ್ಟೊಂದು ಪ್ರೀತಿ ಇದೆ ಎಂದು ಹೇಳಿದ್ದಾರೆ.

BIG NEWS : `ತುಳು' ಭಾಷೆ 2 ನೇ ರಾಜ್ಯ ಭಾಷೆಯನ್ನಾಗಿ ಪರಿಗಣಿಸುವ ಬಗ್ಗೆ ಪರಿಶೀಲನೆ : CM ಸಿದ್ದರಾಮಯ್ಯ BIG NEWS: CONSIDERING CONSIDERING 'Tulu' as 2nd state language: CM Siddaramaiah
Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಸೊರಬದ ಉಳವಿಯ ‘KPS ಶಾಲೆ’ಗೆ 2026-27ನೇ ಸಾಲಿನ ಪ್ರೌಢಶಾಲಾ ದಾಖಲಾತಿ ಆರಂಭ

16/04/2026 9:39 PM2 Mins Read

BREAKING: ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ಮುಂದುವರಿಸಿ ಸರ್ಕಾರದ ಅಧಿಕೃತ ಆದೇಶ

16/04/2026 9:28 PM1 Min Read

‘ಸಾಗರ ನಗರಸಭೆ’ ವಿರುದ್ಧ ಸಿಡಿದೆದ್ದ ‘ವರದ ಕಾಲೋನಿ’ ಜನರು: ಮೂಲಭೂತ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ

16/04/2026 8:12 PM2 Mins Read
Recent News

ಶಿವಮೊಗ್ಗ: ಸೊರಬದ ಉಳವಿಯ ‘KPS ಶಾಲೆ’ಗೆ 2026-27ನೇ ಸಾಲಿನ ಪ್ರೌಢಶಾಲಾ ದಾಖಲಾತಿ ಆರಂಭ

16/04/2026 9:39 PM

BREAKING: ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ಮುಂದುವರಿಸಿ ಸರ್ಕಾರದ ಅಧಿಕೃತ ಆದೇಶ

16/04/2026 9:28 PM

BREAKING: ಇಸ್ರೇಲ್-ಲೆಬನಾನ್ ನಡುವೆ 10 ದಿನಗಳ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರಂಪ್

16/04/2026 9:22 PM

ಕಾರಿನ ಇಂಡಿಕೇಟರ್ ಹಾಕಿದಾಗ ‘ಟಿಕ್-ಟಿಕ್’ ಸದ್ದು ಬರುವುದೇಕೆ? ಇದರ ಹಿಂದಿರುವ ಅಸಲಿ ರಹಸ್ಯ ಇಲ್ಲಿದೆ!

16/04/2026 9:09 PM
State News
KARNATAKA

ಶಿವಮೊಗ್ಗ: ಸೊರಬದ ಉಳವಿಯ ‘KPS ಶಾಲೆ’ಗೆ 2026-27ನೇ ಸಾಲಿನ ಪ್ರೌಢಶಾಲಾ ದಾಖಲಾತಿ ಆರಂಭ

By kannadanewsnow0916/04/2026 9:39 PM KARNATAKA 2 Mins Read

ಶಿವಮೊಗ್ಗ: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನಗರ ಪ್ರದೇಶದ ಶಾಲೆಗಳಿಗಿಂತಲೂ ಮಿಗಿಲಾದ ಅತ್ಯಾಧುನಿಕ ಹಾಗೂ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವ ಶಿವಮೊಗ್ಗ ಜಿಲ್ಲೆಯ…

BREAKING: ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ಮುಂದುವರಿಸಿ ಸರ್ಕಾರದ ಅಧಿಕೃತ ಆದೇಶ

16/04/2026 9:28 PM

‘ಸಾಗರ ನಗರಸಭೆ’ ವಿರುದ್ಧ ಸಿಡಿದೆದ್ದ ‘ವರದ ಕಾಲೋನಿ’ ಜನರು: ಮೂಲಭೂತ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ

16/04/2026 8:12 PM

Rain In Karnataka: ಕರ್ನಾಟಕದ 12 ಜಿಲ್ಲೆಗಳಲ್ಲಿ ಮಳೆ ಅಬ್ಬರ: ಮುಂದಿನ 3 ಗಂಟೆ ‘ಯೆಲ್ಲೋ ಅಲರ್ಟ್’ ಘೋಷಿಸಿದ ಹವಾಮಾನ ಇಲಾಖೆ

16/04/2026 7:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.