ಧಾರವಾಡ : ಒಂದೇ ಕುಟುಂಬದ ಠೇವಣಿ ಹಣ ಮರಳಿಸದ ಕೋ-ಆಪರೇಟಿವ ಸೊಸೈಟಿಗೆ ದಂಡ ವಿಧಸಿ ಮತ್ತು ಪರಿಹಾರಕ್ಕೆ ಗ್ರಾಹಕರ ಆಯೋಗ ಆದೇಶ ಹೊರಡಿಸಿದೆ.
ಹುಬ್ಬಳ್ಳಿಯ ಸೆಂಟ್ರಲ್ಎ ಕ್ಸೈಸ್ ಕಾಲೋನಿಯ ನಿವಾಸಿಗಳಾದ ಅಶೋಕ ಮತ್ತು ರೇಖಾ ಅನ್ವೇಕರ್ ಹಾಗೂ ಸುಮಾ ಮತ್ತು ಅವರ ಮಗಳು ನಿಸ್ಮಿತಾ ವಿಠ್ಠಲಕರಇವರು ಹುಬ್ಬಳ್ಳಿಯ ಗೋಕುಲ ರೋಡ್ನಿಲ್ಲಿರುವ ಎದುರುದಾರರಾದ ಕಿತ್ತೂರುರಾಣಿ ಚೆನ್ನಮ್ಮ ಕೋ-ಆಪರೇಟಿವ ಸೊಸೈಟಿಯಲ್ಲಿ 2023-24 ರಲ್ಲಿತಲಾ ರೂ:13 ಲಕ್ಷ, ರೂ:5,50,000, ರೂ:14,50,000 ಹಾಗೂ ರೂ:3,50,000 ಮೊತ್ತವನ್ನು ಠೇವಣಿ ಇಟ್ಟಿದ್ದರು. ಕೇಲವು ಠೇವಣಿಗಳ ಅವಧಿ ಮುಕ್ತಾಯವಾಗಿದ್ದವು ಮತ್ತು ಕೇಲವೊಂದು ಮುಂದಿನ ವರ್ಷದಲ್ಲಿ ಮುಕ್ತಾಯವಾಗುತ್ತಿದ್ದವು. ದೂರುದಾರರು ಎದುರುದಾರರ ಬಗ್ಗೆ ವ್ಯವಹಾರಿಕ ತೊಂದರೆಗಳನ್ನು ಅರಿತು ತಮ್ಮ ಎಲ್ಲ ಠೇವಣಿ ಹಣ ಮರಳಿಸುವಂತೆ ಎದುರುದಾರರಿಗೆ ಸಾಕಷ್ಟು ಸಲ ಕೇಳಿಕೊಂಡಿರುತ್ತಾರೆ. ಆದರೆ ಎದುರುದಾರರು ಠೇವಣಿ ಹಣವನ್ನು ಕೊಡದೆ ತಮಗೆ ಮೋಸ ಮಾಡಿ ಸೇವಾ ನ್ಯೂನ್ಯತೆ ಎಸಗಿದ್ದಾರೆ ಅಂತ ಹೇಳಿ ಸೊಸೈಟಿಯವರ, ಎದುರುದಾರರ ಮೇಲೆ ಕ್ರಮಕೈಗೊಂಡು ತಮ್ಮ ಠೇವಣಿ ಹಣ ಮರುಪಾವತಿಸುವಂತೆ ಮತ್ತು ತಮಗಾದ ತೊಂದರೆ ಮತ್ತು ಮಾನಸಿಕ ಹಿಂಸೆಗೆ ಪರಿಹಾರ ಕೊಡಿಸಬೇಕೆಂದು ಜಿಲ್ಲಾ ಗ್ರಾಹಕರ ಆಯೋಗಕ್ಕೆ ದಿನಾಂಕ 09.07.2025 ದೂರುಗಳನ್ನು ಸಲ್ಲಿಸಿದ್ದರು.
ಸದರಿ ದೂರು ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷರಾದ ಈಶಪ್ಪ. ಭೂತೆ ಹಾಗೂ ವಿ.ಅ. ಬೋಳಶೆಟ್ಟಿ ಸದಸ್ಯರು ದೂರುದಾರರು ಎದುರುದಾರರ ಸೊಸೈಟಿಯ ಸದಸ್ಯರಾಗಿರುತ್ತಾರೆ. ದೂರುದಾರರು ಠೇವಣಿ ರೂಪದಲ್ಲಿ ಇಟ್ಟಂತಹ ಹಣವನ್ನು ಎದುರುದಾರರು ತಮ್ಮ ಸೊಸೈಟಿಯ ಅಭಿವೃದ್ಧಿಗಾಗಿ ಉಪಯೋಗಿಸಿಕೊಂಡಿರುವುದು ಕಂಡುಬರುತ್ತದೆ. ಅಲ್ಲದೆ ದೂರುದಾರರಿಗೆ ಹಣದ ಅವಶ್ಯಕತೆ ಇದ್ದು ಅದನ್ನು ಎದುರುದಾರರು ಮರಳಿಸದೆ ಇರುವುದು ಗ್ರಾಹಕರ ರಕ್ಷಣಾ ಕಾಯ್ದೆಯಡಿ ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಆಯೋಗ ತೀರ್ಪು ನೀಡಿದೆ. ಠೇವಣಿ ಇಟ್ಟ ದಿನಾಂಕಗಳಿಂದ ಬಡ್ಡಿಯೊಂದಿಗೆ ಲೆಕ್ಕ ಹಾಕಿ ದೂರುದಾರರಿಗೆ ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ಹಿಂದಿರುಗಿಸುವಂತೆ ಆಯೋಗ ಆದೇಶಿಸಿದೆ. ಜೊತೆಗೆ ಸೇವಾ ನ್ಯೂನ್ಯತೆಯಿಂದ ದೂರುದಾರರಿಗೆ ಆಗಿರುವ ಅನಾನುಕೂಲ, ತೊಂದರೆ ಹಾಗೂ ಮಾನಸಿಕ ಹಿಂಸೆಗೆ ತಲಾ ರೂ.50,000 ಪರಿಹಾರ ಹಾಗೂ ತಲಾ ರೂ.10,000 ಪ್ರಕರಣದ ಖರ್ಚು ವೆಚ್ಚ ನೀಡಲು ಎದುರುದಾರರಿಗೆ ಆಯೋಗ ತನ್ನ ತೀರ್ಪಿನಲ್ಲಿ ಆದೇಶಿಸಿದೆ.