ಕೊಡಗು : ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿ ಮುಂದುವರೆದಿದ್ದು ಪೊನ್ನಂಪೇಟೆ ತಾಲೂಕಿನ ಕೋಣನಕಟ್ಟೆಯಲ್ಲಿ ಕಾಡಾನೇ ದಾಳಿಗೆ ಮತ್ತೊಂದು ಬಲಿಯಾಗಿದೆ. ನಿವೃತ್ತ ಐಜಿಪಿ ಅಣ್ಣಳಮಾಡ ಸುನಿಲ್ ಅಚ್ಚಯ್ಯ ಪತ್ನಿ ಸಂಧ್ಯಾ (60) ಅವರು ಸಾವನಪ್ಪಿದ್ದಾರೆ ಬೆಳಗ್ಗೆ 9 ಗಂಟೆ ಸುಮಾರಿಗೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ.
ಗಾಯಗೊಂಡ ಸಂಧ್ಯಾ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಸಾವನಪ್ಪಿದ್ದಾರೆ. ಘಟನೆಯಲ್ಲಿ ಕೆಲವು ಕಾರ್ಮಿಕರಿಗೆ ಗಾಯವಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆಯಷ್ಟೇ ದೆಹಲಿಯಿಂದ ಸಂಧ್ಯಾ ಕುಟುಂಬ ಸ್ವಗ್ರಾಮಕ್ಕೆ ಬಂದಿತ್ತು.








