ಬೆಂಗಳೂರು : ಗಣರಾಜ್ಯೋತ್ಸವದ ಅಂಗವಾಗಿ ನಾಡಿನ ಜನತೆಗೆ ಸಿಎಂ ಸಿದ್ದರಾಮಯ್ಯ ಸಂದೇಶ ನೀಡಿದ್ದು ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣದ ಬಳಿಕ ಸಿಎಂ ಸಿದ್ದರಾಮಯ್ಯ ಸಂವಿಧಾನವನ್ನು ದುರ್ಬಲಗೊಳಿಸುವ ನಿರಂತರ ಪ್ರಯತ್ನ ನಡೆಯುತ್ತಿದೆ. ಸಂವಿಧಾನವನ್ನ ನಾವು ರಕ್ಷಿಸಿದರೆ ಅದು ನಮ್ಮನ್ನ ರಕ್ಷಣೆ ಮಾಡುತ್ತದೆ ಎಂದು ತಿಳಿಸಿದರು.
ಸಂವಿಧಾನ ಜಾರಿಗೆ ಬಂದು 76 ವರ್ಷಗಳು ಪೂರ್ಣಗೊಂಡಿದೆ. ಗ್ಯಾರಂಟಿ ಇಂದ ಸಮಾಜದಲ್ಲಿ ಭದ್ರತೆಯ ಭಾವನೆ ಮನೆ ಮಾಡಿದೆ ಸಂವಿಧಾನದ ಆಶಯ ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಆಗಿದೆ ಸಂವಿಧಾನ ವಿರೋಧಿಸುವವರು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿರುವವರು ಅಂಬೇಡ್ಕರ್ ಅವರು ಸಂವಿಧಾನ ಅರ್ಪಿಸಿದಾಗಲು ಅದನ್ನು ವಿರೋಧಿಸಿದ್ದರು.
ಈಗಲೂ ಸಂವಿಧಾನ ಬದಲಾಯಿಸುವ ಕೂಗುಗಳು ಅಲಲ್ಲಿ ಕೇಳಿ ಬರುತ್ತಿವೆ. ಆದರೆ ಇದು ಸುಲಭದ ಕೆಲಸ ಅಲ್ಲ ಎಂದು ಅರ್ಥ ಮಾಡಿಕೊಂಡವರು ಅದನ್ನು ನಿಧಾನವಾಗಿ ದುರ್ಬಲಗೊಳಿಸುವ ಪ್ರಯತ್ನದಲ್ಲಿದ್ದಾರೆ. ಸಂವಿಧಾನವನ್ನು ರಕ್ಷಿಸುವ ಪ್ರತಿಜ್ಞೆಯನ್ನು ಮಾಡಬೇಕಾಗಿದೆ.
ಸರ್ಕಾರದ ಯೋಜನೆಗಳು ನೂರಾರು. ಆದರೆ ಅವುಗಳ ಹಿಂದಿನ ಸದಾಶಯ ಮಾತ್ರ ಒಂದೇ. ಅದು ಸಮ ಸಮಾಜದ ನಿರ್ಮಾಣ, ಸರ್ವರಿಗೂ ಸಮಪಾಲು ಸಮಬಾಳು, ಶಕ್ತಿಶಾಲಿ ರಾಜ್ಯ ಕಟ್ಟುವ ಪ್ರಯತ್ನಕ್ಕೆ ನಿಮ್ಮೆಲ್ಲರ ಸಹಕಾರ ಬೆಂಬಲ ಆಶೀರ್ವಾದ ಇರಲಿ ಎಂದು ಮನವಿ ಮಾಡುತ್ತೇನೆ ಎಂದು ಗಣರಾಜ್ಯೋತ್ಸವದ ಅಂಗವಾಗಿ ಸಿಎಂ ಸಿದ್ದರಾಮಯ್ಯ ನಾಡಿನ ಜನತೆಗೆ ಸಂದೇಶ ನೀಡಿದರು.








