ನವದೆಹಲಿ : ಮಧ್ಯಪ್ರದೇಶದ ಕ್ಯಾಬಿನೆಟ್ ಸಚಿವ ಕುನ್ವರ್ ವಿಜಯ್ ಶಾ ಅವರು ಮಹಿಳಾ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದು, ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇಂದು ಅವರು FIR ರದ್ದು ಕೋರಿ ಸುಪ್ರೀಂ ಕೋರ್ಟ್ ಗೆ ಮೊರೆ ಹೋಗಿದ್ದು, ಈ ವೇಳೆ ಸುಪ್ರೀಂ ಕೋರ್ಟ್ ಸಿಜೆ ಗವಾಯಿ ಅವರು ಸಚಿವರಿಗೆ ಛೀಮಾರಿ ಹಾಕಿದರು.
ಹೌದು ಸೋಫಿಯಾ ಖುರೇಶಿ ಅವರ ಕುರಿತು ವಿಜಯ ಶಾ ಕಾರ್ಯಕ್ರಮ ಒಂದರಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ್ದರು, ನಮ್ಮ ಹೆಣ್ಣುಮಕ್ಕಳ ಸಿಂಧೂರವನ್ನು ಅಳಿಸಿದವರಿಗೆ ತಕ್ಕ ಪಾಠ ಕಲಿಸಲು ನಾವು ಅವರ ಸಹೋದರಿಯನ್ನೇ ಕಳುಹಿಸಿದ್ದೆವು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಬಳಿಕ ಈ ಒಂದು ಹೇಳಿಕೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಕ್ಷಮೆ ಕೂಡ ಯಾಚಿಸಿದರು.
ಆದರೆ ಇವರ ವಿರುದ್ಧ FIR ದಾಖಲಾಗಿತ್ತು. ಇದೀಗ ಎಫ್ ಐ ಆರ್ ರದ್ದು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಈ ವೇಳೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಸಿಜೆ ಗವಾಯಿ ಅವರು ಉನ್ನತ ಸ್ಥಾನದಲ್ಲಿರುವ ನಿಮ್ಮಿಂದ ಇಂತಹ ಹೇಳಿಕೆ ನಿರೀಕ್ಷಿಸಲಿಲ್ಲ. ಅಂತ ದೊಡ್ಡ ಕಾರ್ಯಕ್ರಮಗಳಲ್ಲಿ ಈ ಒಂದು ಹೇಳಿಕೆ ನೀಡುವ ಅವಶ್ಯಕತೆ ಇತ್ತಾ? ಎಂದು ಛೀ ಮಾರಿ ಹಾಕಿದೆ. ಬಳಿಕ ವಿಚಾರಣೆಯನ್ನು ನಾಳೆಗೆ ಮುಂದೂಡಲಾಯಿತು.
ಪ್ರಕರಣ ಹಿನ್ನೆಲೆ?
ವಿಜಯ್ ಶಾ ನೀಡಿದ್ದ ಹೇಳಿಕೆಯು ದೇಶದಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಕಳೆದ ಒಂದು ವಾರಕ್ಕೂ ಹೆಚ್ಚು ಅವಧಿಯಿಂದ ಕರ್ನಲ್ ಸೋಫಿಯಾ ಅವರ ಬಗ್ಗೆ ದೇಶದಾದ್ಯಂತ ಜನ ಹೆಮ್ಮೆಯಿಂದ ಮಾತನಾಡಿಕೊಳ್ಳುತ್ತಿದ್ದಾರೆ. ಆದರೆ, ಇದೇ ಸಂದರ್ಭದಲ್ಲಿ ಬಿಜೆಪಿಯ ಪ್ರಭಾವಿ ಸಚಿವರ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಅಲ್ಲದೇ ಈ ಹೇಳಿಕೆಯಿಂದ ಬಿಜೆಪಿ ಸಹ ಮುಜುಗರಕ್ಕೆ ಒಳಗಾಗಿತ್ತು.
ಇದು ದೇಶದಾದ್ಯಂತ ಭಾರೀ ಮೆಚ್ಚುಗೆಗೆ ಕಾರಣವಾಗಿತ್ತು. ಆದರೆ, ಬಿಜೆಪಿಯ ಸಚಿವ ಕನ್ವರ್ ವಿಜಯ್ ಶಾ, “ನಮ್ಮ ಹೆಣ್ಣುಮಕ್ಕಳ ಸಿಂಧೂರವನ್ನು ಅಳಿಸಿದವರಿಗೆ ತಕ್ಕ ಪಾಠ ಕಲಿಸಲು ನಾವು ಅವರ ಸಹೋದರಿಯನ್ನೇ ಕಳುಹಿಸಿದ್ದೆವು” ಎಂದು ಸೋಫಿಯಾ ಖುರೇಷಿ ಅವರ ಬಗ್ಗೆ ತುಚ್ಛವಾಗಿ ಮಾತನಾಡಿದ್ದರು. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಈ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿತ್ತು.
ಬಳಿಕ ತಮ್ಮ ಹೇಳಿಕೆ ವಿವಾದದ ಸ್ವರೂಪ ಪಡೆಯುತ್ತಲೇ ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಧ್ಯ ಪ್ರದೇಶ ಸಚಿವ ವಿಜಯ್ ಶಾ, ಸಹೋದರಿ ಸೋಫಿಯಾ ಖುರೇಷಿ ಬಗ್ಗೆ ನಾನು ಕನಸಿನಲ್ಲೂ ಆ ರೀತಿ ಭಾವಿಸಲು ಸಾಧ್ಯವಿಲ್ಲ, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ. ಸಿಸ್ಟರ್ ಸೋಫಿಯಾ ಜಾತಿ ಮತ್ತು ಧರ್ಮವನ್ನು ಮೀರಿ ಭಾರತಕ್ಕೆ ಕೀರ್ತಿ ತಂದಿದ್ದಾರೆ. ಅವರು ನಮ್ಮ ಸ್ವಂತ ಸಹೋದರಿಗಿಂತ ಹೆಚ್ಚು ಗೌರವಾನ್ವಿತರು.
ಅವರು ರಾಷ್ಟ್ರಕ್ಕೆ ಮಾಡಿದ ಸೇವೆಗೆ ನಾನು ಅವರಿಗೆ ನಮಸ್ಕರಿಸುತ್ತೇನೆ. ನಮ್ಮ ಕನಸಿನಲ್ಲಿಯೂ ಅವರನ್ನು ಅವಮಾನಿಸುವ ಬಗ್ಗೆ ನಾವು ಯೋಚಿಸಲು ಸಹ ಸಾಧ್ಯವಿಲ್ಲ. ಆದರೂ, ನನ್ನ ಮಾತುಗಳು ಸಮಾಜ ಮತ್ತು ಧರ್ಮಕ್ಕೆ ನೋವುಂಟು ಮಾಡಿದ್ದರೆ, ನಾನು ಒಂದಲ್ಲ ಹತ್ತು ಬಾರಿ ಕ್ಷಮೆಯಾಚಿಸಲು ಸಿದ್ಧನಿದ್ದೇನೆ ಎಂದು ಅವರು ಹೇಳಿದ್ದಾರೆ.