ಬೆಂಗಳೂರು : ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಬಾಂಗ್ಲಾದೇಶ ಸೇರಿದಂತೆ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ಗಣತಿ ನಡೆಯಿಸಿ ಶೀಘ್ರದಲ್ಲಿ ವರದಿ ನೀಡುವಂತೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಪೊಲೀಸ್ ಅಧಿಕಾರಿಗಳಿಗೆ ಇದೀಗ ಸೂಚನೆ ನೀಡಿದ್ದಾರೆ.
ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದೇಶಿ ಪ್ರಜೆಗಳ ಕುರಿತು ಮಾಹಿತಿ ಸಂಗ್ರಹಿಸಿ ವರದಿ ಬಹಿರಂಗಪಡಿಸಲಾಗುತ್ತದೆ ಎಂದರು. ಹಾಸನ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕಾಫಿ ತೋಟಗಳಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಕಾರ್ಮಿಕರಾಗಿದ್ದಾರೆ ಎಂಬ ಮಾಹಿತಿ ಇದೆ.
ಅದೇ ರೀತಿ ಬೆಂಗಳೂರಿನ ಆನೇಕಲ್ ಸೇರಿ ಕೆಲ ಪ್ರದೇಶಗಳಲ್ಲಿ ಬಾಂಗ್ಲಾ ಪ್ರಜೆಗಳು ನೆಲೆಸಿದ್ದಾರೆ. ಹಾಸನ, ಕೊಡಗು, ಚಿಕ್ಕಮಗಳೂರು ಕಾಫಿ ತೋಟದಲ್ಲಿ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರು ಇದ್ದಾರೆ. ಬೆಂಗಳೂರು ಹಾಗೂ ಸುತ್ತಮುತ್ತ ಕೂಡ ಬಾಂಗ್ಲ ನ್ನರು ಸೇರಿ 3 ದೇಶಗಳ ವಲಸಿಗರು ಹೆಚ್ಚು.ಈ ಹಿಂದೆ 200 ವಿದೇಶಿ ಪ್ರಜೆಗಳು ಗಡೀಪಾರು, ಇನ್ನೂ ಹಲವರು ಇಲ್ಲೇ ಅಕ್ರಮವಾಗಿ ವಾಸವಾಗಿದ್ದಾರೆ. ಎಲ್ಲ ಅಕ್ರಮ ವಲಸಿಗರ ಪತ್ತೆಗೆ ಸರ್ವ ಪ್ರಯತ್ನ, ಈ ಬಗ್ಗೆ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುತ್ತೆ ಎಂದರು.