Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Watch video:ಅಭಿಮಾನಿಗಳ ನೂಕುನುಗ್ಗಲಿನಲ್ಲಿ ಸಿಲುಕಿದ ನಿಧಿ ಅಗರ್ವಾಲ್: ದೊಡ್ಡ ಅವಾಂತರದಿಂದ ಕೂದಲೆಳೆ ಅಂತರದಲ್ಲಿ ಪಾರು!

18/12/2025 9:53 AM

BIG NEWS : ಪ್ರಧಾನಿ ಮೋದಿ ಆಡಳಿತದಲ್ಲಿ ದೇಶದ ಸಾಲ `200 ಲಕ್ಷ ಕೋಟಿ’ ರೂ.ಗೆ ಏರಿಕೆ : CM ಸಿದ್ದರಾಮಯ್ಯ

18/12/2025 9:43 AM

ALERT : ಕಣ್ಣು ಮಿಟಿಕಿಸದೇ ‘ಮೊಬೈಲ್’ನೋಡುವವರೇ ಎಚ್ಚರ : ಈ ಗಂಭೀರ ಸಮಸ್ಯೆ ಬರಬಹುದು.!

18/12/2025 9:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಪ್ರಧಾನಿ ಮೋದಿ ಆಡಳಿತದಲ್ಲಿ ದೇಶದ ಸಾಲ `200 ಲಕ್ಷ ಕೋಟಿ’ ರೂ.ಗೆ ಏರಿಕೆ : CM ಸಿದ್ದರಾಮಯ್ಯ
KARNATAKA

BIG NEWS : ಪ್ರಧಾನಿ ಮೋದಿ ಆಡಳಿತದಲ್ಲಿ ದೇಶದ ಸಾಲ `200 ಲಕ್ಷ ಕೋಟಿ’ ರೂ.ಗೆ ಏರಿಕೆ : CM ಸಿದ್ದರಾಮಯ್ಯ

By kannadanewsnow5718/12/2025 9:43 AM

ಬೆಳಗಾವಿ : ಮನಮೋಹನ್ ಸಿಂಗ್ ಅವರು ದೇಶದ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ದೇಶದ ಸಾಲ ಸುಮಾರು ₹53.11 ಲಕ್ಷ ಕೋಟಿ ಆಗಿತ್ತು. ಆದರೆ ಮೋದಿಯವರು ಅಧಿಕಾರಕ್ಕೆ ಬಂದ ನಂತರ ಸಾಲದ ಮೊತ್ತ ಸುಮಾರು 200 ಲಕ್ಷ ಕೋಟಿಯನ್ನೂ ಮೀರಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕೇಂದ್ರ ಎನ್‌ಡಿಎ ಸರ್ಕಾರದ ದ್ವೇಷ ರಾಜಕೀಯವನ್ನು ಖಂಡಿಸಿ ಸುವರ್ಣಸೌಧದ ಗಾಂಧಿ ಪ್ರತಿಮೆ ಬಳಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮನಮೋಹನ್ ಸಿಂಗ್ ಅವರು ದೇಶದ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ದೇಶದ ಸಾಲ ಸುಮಾರು ₹53.11 ಲಕ್ಷ ಕೋಟಿ ಆಗಿತ್ತು. ಆದರೆ ಮೋದಿಯವರು ಅಧಿಕಾರಕ್ಕೆ ಬಂದ ನಂತರ ಸಾಲದ ಮೊತ್ತ ಸುಮಾರು 200 ಲಕ್ಷ ಕೋಟಿಯನ್ನೂ ಮೀರಿದೆ. ಪ್ರಧಾನಿ ಮೋದಿಯವರು ಅಧಿಕಾರಕ್ಕೆ ಬಂದು 11 ವರ್ಷಗಳಲ್ಲಿ ಈ ಸಾಲದ ಮೊತ್ತವು ₹148 ಲಕ್ಷ ಕೋಟಿ ಹೆಚ್ಚಾಗಿದೆ. ಬಿಜೆಪಿಯವರು ತಮ್ಮ ಈ ತಪ್ಪನ್ನು ಮರೆಮಾಚಲು ಇಂತಹ ಸುಳ್ಳು ಪ್ರಕರಣಗಳ ಮೊರೆಹೋಗುತ್ತಿದ್ದಾರೆ ಎಂದರು.

ಬಿಜೆಪಿಯವರ ದ್ವೇಷ ರಾಜಕಾರಣ ನ್ಯಾಯ ದೇವತೆಯ ಎದುರು ಸೋತಿದೆ. ಕೇಂದ್ರ ಅಥವಾ ರಾಜ್ಯಗಳಾಗಲಿ, ಬಿಜೆಪಿ ಅಧಿಕಾರದಲ್ಲಿರುವ ಕಡೆಗಳಲ್ಲೆಲ್ಲಾ ಕಾಂಗ್ರೆಸ್ ನವರನ್ನು ಗುರಿಯಾಗಿಸಿ, ಅವರನ್ನು ಅಪರಾಧಿಗಳಾಗಿ ಬಿಂಬಿಸಿ, ನ್ಯಾಯಾಲಯಕ್ಕೆ ಎಡತಾಕುವಂತೆ ಮಾಡುತ್ತಿದ್ದಾರೆ. ಇಂತಹ ಅಸತ್ಯವಾದ ವಿಚಾರವನ್ನು ಮುನ್ನಲೆಗೆ ತಂದು ಬಿಜೆಪಿಯವರು ಸ್ವಾರ್ಥ ಸಾಧನೆಯಲ್ಲಿ ತೊಡಗಿದ್ದಾರೆ. ಬಿಜೆಪಿಯವರು ತಮ್ಮ ತಪ್ಪುಗಳನ್ನು ಮರೆಮಾಚಲು ಇಂತಹ ದುಷ್ಕೃತ್ಯಕ್ಕೆ ಕೈಹಾಕಿದ್ದಾರೆ. ಇಂದು ದೇಶದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಹಣದುಬ್ಬರ  ಹೆಚ್ಚಿದ್ದು ನಿರುದ್ಯೋಗದ ಪ್ರಮಾಣ ಏರಿಕೆಯಾಗಿದೆ. ಜನರ ಮೇಲೆ ತೆರಿಗೆಗಳನ್ನು ಮನಬಂದಂತೆ ಹೇರಲಾಗುತ್ತಿದೆ, ಭಾರತವನ್ನು ಸಾಲಗಾರ ದೇಶವನ್ನಾಗಿ ಮಾಡಲಾಗುತ್ತಿದೆ.

Narendra Modi ಅವರು ಅಧಿಕಾರಕ್ಕೆ ಬಂದ ಮೇಲೆ ಪ್ರತಿವರ್ಷ 2 ಕೋಟಿ ಉದ್ಯೋಗವನ್ನು ಸೃಷ್ಟಿಸುವುದಾಗಿ ಘೋಷಿಸಿದ್ದರು. ವಿದೇಶದಲ್ಲಿನ ಕಪ್ಪುಹಣವನ್ನು ದೇಶಕ್ಕೆ ತಂದು ದೇಶದ ಪ್ರತಿಯೊಬ್ಬರ ಖಾತೆಗೂ 15 ಲಕ್ಷ ರೂ.ಗಳನ್ನು ನೀಡುವುದಾಗಿ ಹೇಳಿದರು. ಈ ಯಾವುದೇ ಭರವಸೆಗಳನ್ನು ಮೋದಿಯವರು ಈಡೇರಿಸಲಿಲ್ಲ. ಇತ್ತೀಚೆಗೆ ದೈನಂದಿನ ಬಳಕೆಯ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆಗಳು ಗಗನಕ್ಕೇರಿವೆ. ಬಿಜೆಪಿಯವರು ತಮ್ಮ ಇಂತಹ ತಪ್ಪುಗಳನ್ನು ಮರೆಮಾಚಲು, ಇಂತಹ ಸುಳ್ಳು ಪ್ರಕರಣಗಳಿಗೆ ಹೆಚ್ಚು ಒತ್ತು ನೀಡುವ ಮೂಲಕ, ದೇಶದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ.

1937 ರಲ್ಲಿ ಜವಾಹರ್ ಲಾಲ್ ನೆಹರೂರವರು ದೇಶದ ಜನರಲ್ಲಿ ಸ್ವಾತಂತ್ರ್ಯ ಹೋರಾಟದ ಬಗ್ಗೆ ಜಾಗೃತಿ ಮೂಡಿಸಲು ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಪ್ರಾರಂಭಿಸಿದರು. ಇದು ಕಾಂಗ್ರೆಸ್ ಪಕ್ಷದ ಆಸ್ತಿ. ನಂತರ ಈ ಪತ್ರಿಕೆಯನ್ನು ಯಂಗ್ ಇಂಡಿಯನ್ ಸಂಸ್ಥೆ ವಹಿಸಿಕೊಂಡಿತು. ಸಂಸ್ಥೆಗೆ ಸೇರಿದ್ದ ಸೋನಿಯಾ ಗಾಂಧಿ, Rahul Gandhi, ಮೋತಿಲಾಲ್ ವೋರಾ ಮತ್ತು ಆಸ್ಕರ್ ಫರ್ನಾಂಡಿಸ್ ಇವರ ಮೇಲೆ ಪ್ರಕರಣ ದಾಖಲಿಸಿ, ಇಡಿ ತನಿಖೆಯನ್ನು ಮಾಡಿಸಲಾಯಿತು. 2012 ರಲ್ಲಿ ಸುಬ್ರಮಣ್ಯಂಸ್ವಾಮಿಯವರು ಇವರ ವಿರುದ್ಧ ದಾವೆ ಹೂಡಿದ್ದರು. ಪ್ರಸ್ತುತ ಇ.ಡಿ ಯವರು ಸಲ್ಲಿಸಿದ್ದ ಆರೋಪ ಪಟ್ಟಿಯನ್ನು ವಿಚಾರಣಾ ನ್ಯಾಯಾಲಯ ತಿರಸ್ಕರಿಸಿದೆ. ಈ ಪ್ರಕರಣವನ್ನು ಸುಳ್ಳು ಎಂದು ನ್ಯಾಯ ಎತ್ತಿಹಿಡಿದಿದೆ.

ಮಹಾತ್ಮಾಗಾಂಧಿ ಉದ್ಯೋಗ ಖಾತ್ರಿ ಯೋಜನೆ ಯನ್ನು ಬದಲಿಸಿ VB-G RAM G ಯೋಜನೆಯೆಂದು ಬದಲಿಸಿದ್ದಾರೆ. ರಾಜಭವನವನ್ನು ಇಂದು ಲೋಕಭವನ ಎಂದು ಬದಲಾಯಿಸಿದ್ದಾರೆ. ಇದು ಸರ್ಕಾರದ ಆಸ್ತಿಯಾಗಿದ್ದು, ಇದರ ಹೆಸರನ್ನು ಬದಲಾವಣೆ ಮಾಡಿದ್ದು ಸರಿಯಲ್ಲ. ಕೇಂದ್ರ ಹೆಸರು ಬದಲಾಯಿಸುವ ಕಾರ್ಯದಲ್ಲಿ ನಿರತವಾಗಿದೆಯೇ ಹೊರತು ಬಡವರಿಗೆ ಅನುಕೂಲ ಕಲ್ಪಿಸುವ ಕೆಲಸವನ್ನು ಮಾಡುತ್ತಿಲ್ಲ.

ಮಹಾತ್ಮಾಗಾಂಧಿ ಹಾಗೂ ಅಂಬೇಡ್ಕರ್ ರವರ ಚಿಂತನೆಗಳನ್ನು ಇಷ್ಟಪಡದ ಬಿಜೆಪಿಯವರಿಗೆ ಬಡವರನ್ನೂ ಕಂಡರೂ ಆಗುವುದಿಲ್ಲ. ದೇಶದ ಬಡವರಿಗೆಂದು ತಂದಿರುವ ಯಾವುದೇ ಯೋಜನೆಗಳಿಗೆ ಬಿಜೆಪಿಯವರ ಸಹಮತಿಯಿಲ್ಲ. ಬಡವರು, ದೀನದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರನ್ನು ಕಡೆಗಣಿಸುವ ಬಿಜೆಪಿಯವರು, ಕರ್ನಾಟಕದಲ್ಲಿ ಬಡವರಿಗಾಗಿ ತಂದ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದರು. ಆದರೆ ಈ ಜನಪರ ಯೋಜನೆಯನ್ನು ದೇಶದೆಲ್ಲೆಡೆ ಬಿಜೆಪಿ ಅನುಸರಿಸುತ್ತಿದೆ.

ಇಂದು ನ್ಯಾಯಾಲಯದ ತೀರ್ಪಿನ ಪರವಾಗಿ ಪ್ರತಿಭಟನೆಯನ್ನು ಕೈಗೊಂಡಿದ್ದು, ಸದನದ ಒಳಗೆ ಮತ್ತು ಹೊರಗೆ ಈ ಪ್ರತಿಭಟನೆಯನ್ನು ಮುಂದುವರೆಸಲಿದ್ದೇವೆ. ರಾಜ್ಯ ಹಾಗೂ ದೇಶದುದ್ದಕ್ಕೂ ಬಿಜೆಪಿಯ ಕುತಂತ್ರ ನೀತಿಯನ್ನು ವಿರೋಧಿಸಿ ಪ್ರತಿಭಟನೆಯನ್ನು ಕೈಗೊಳ್ಳುತ್ತೇವೆ. ಕಾಂಗ್ರೆಸ್ ಎಂದಿಗೂ ಕೈಕಟ್ಟಿ ಕೂರುವ ಪಕ್ಷವಲ್ಲ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟದ್ದು ಕಾಂಗ್ರೆಸ್ ಪಕ್ಷ. ಬಿಜೆಪಿಯವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ. ಆದರೆ ಈಗ ದ್ವೇಷ ರಾಜಕಾರಣವನ್ನು ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇಂದು ದೇಶದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಹಣದುಬ್ಬರ ಹೆಚ್ಚಿದ್ದು ನಿರುದ್ಯೋಗದ ಪ್ರಮಾಣ ಏರಿಕೆಯಾಗಿದೆ. ಜನರ ಮೇಲೆ ತೆರಿಗೆಗಳನ್ನು ಮನಬಂದಂತೆ ಹೇರಲಾಗುತ್ತಿದೆ, ಭಾರತವನ್ನು ಸಾಲಗಾರ ದೇಶವನ್ನಾಗಿ ಮಾಡಲಾಗುತ್ತಿದೆ.

ಮನಮೋಹನ್ ಸಿಂಗ್ ಅವರು ದೇಶದ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ದೇಶದ ಸಾಲ ಸುಮಾರು ₹53.11 ಲಕ್ಷ ಕೋಟಿ ಆಗಿತ್ತು. ಆದರೆ… pic.twitter.com/PyjcRd2dkU

— Siddaramaiah (@siddaramaiah) December 17, 2025

ಬಿಜೆಪಿಯವರ ದ್ವೇಷ ರಾಜಕಾರಣ ನ್ಯಾಯ ದೇವತೆಯ ಎದುರು ಸೋತಿದೆ. ಕೇಂದ್ರ ಅಥವಾ ರಾಜ್ಯಗಳಾಗಲಿ, @BJP4India ಅಧಿಕಾರದಲ್ಲಿರುವ ಕಡೆಗಳಲ್ಲೆಲ್ಲಾ ಕಾಂಗ್ರೆಸ್ ನವರನ್ನು ಗುರಿಯಾಗಿಸಿ, ಅವರನ್ನು ಅಪರಾಧಿಗಳಾಗಿ ಬಿಂಬಿಸಿ, ನ್ಯಾಯಾಲಯಕ್ಕೆ ಎಡತಾಕುವಂತೆ ಮಾಡುತ್ತಿದ್ದಾರೆ. ಇಂತಹ ಅಸತ್ಯವಾದ ವಿಚಾರವನ್ನು ಮುನ್ನಲೆಗೆ ತಂದು ಬಿಜೆಪಿಯವರು ಸ್ವಾರ್ಥ… pic.twitter.com/g4cHXb7dJz

— Siddaramaiah (@siddaramaiah) December 17, 2025

1937 ರಲ್ಲಿ ಜವಾಹರ್ ಲಾಲ್ ನೆಹರೂರವರು ದೇಶದ ಜನರಲ್ಲಿ ಸ್ವಾತಂತ್ರ್ಯ ಹೋರಾಟದ ಬಗ್ಗೆ ಜಾಗೃತಿ ಮೂಡಿಸಲು ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಪ್ರಾರಂಭಿಸಿದರು. ಇದು ಕಾಂಗ್ರೆಸ್ ಪಕ್ಷದ ಆಸ್ತಿ. ನಂತರ ಈ ಪತ್ರಿಕೆಯನ್ನು ಯಂಗ್ ಇಂಡಿಯನ್ ಸಂಸ್ಥೆ ವಹಿಸಿಕೊಂಡಿತು. ಸಂಸ್ಥೆಗೆ ಸೇರಿದ್ದ ಸೋನಿಯಾ ಗಾಂಧಿ, @RahulGandhi, ಮೋತಿಲಾಲ್ ವೋರಾ ಮತ್ತು… pic.twitter.com/CoTQfMx8LW

— Siddaramaiah (@siddaramaiah) December 17, 2025

 

 

BIG NEWS: Country's debt has increased to `200 lakh crore' under Prime Minister Modi's rule: CM Siddaramaiah
Share. Facebook Twitter LinkedIn WhatsApp Email

Related Posts

ALERT : ಕಣ್ಣು ಮಿಟಿಕಿಸದೇ ‘ಮೊಬೈಲ್’ನೋಡುವವರೇ ಎಚ್ಚರ : ಈ ಗಂಭೀರ ಸಮಸ್ಯೆ ಬರಬಹುದು.!

18/12/2025 9:40 AM3 Mins Read

BREAKING: ಶಿವಮೊಗ್ಗ ಸೆಂಟ್ರಲ್ ಜೈಲ್ ನಿಂದ ಧರ್ಮಸ್ಥಳ ಮಾಸ್ಕ್ ಮ್ಯಾನ್ `ಬುರುಡೆ ಚಿನ್ನಯ್ಯ’ ರಿಲೀಸ್.!

18/12/2025 9:18 AM1 Min Read

BIG NEWS ಇಂದು `CM ಸಿದ್ದರಾಮಯ್ಯ’ಗೆ ಇಂದು ಬಿಗ್ ಡೇ : : ‘ಮುಡಾ ಹಗರಣ ಕೇಸ್’ ಕ್ಲೀನ್ ಚಿಟ್ ಬಗ್ಗೆ ಕೋರ್ಟ್ ನಿಂದ ತೀರ್ಪು | Muda Scam Case

18/12/2025 9:00 AM1 Min Read
Recent News

Watch video:ಅಭಿಮಾನಿಗಳ ನೂಕುನುಗ್ಗಲಿನಲ್ಲಿ ಸಿಲುಕಿದ ನಿಧಿ ಅಗರ್ವಾಲ್: ದೊಡ್ಡ ಅವಾಂತರದಿಂದ ಕೂದಲೆಳೆ ಅಂತರದಲ್ಲಿ ಪಾರು!

18/12/2025 9:53 AM

BIG NEWS : ಪ್ರಧಾನಿ ಮೋದಿ ಆಡಳಿತದಲ್ಲಿ ದೇಶದ ಸಾಲ `200 ಲಕ್ಷ ಕೋಟಿ’ ರೂ.ಗೆ ಏರಿಕೆ : CM ಸಿದ್ದರಾಮಯ್ಯ

18/12/2025 9:43 AM

ALERT : ಕಣ್ಣು ಮಿಟಿಕಿಸದೇ ‘ಮೊಬೈಲ್’ನೋಡುವವರೇ ಎಚ್ಚರ : ಈ ಗಂಭೀರ ಸಮಸ್ಯೆ ಬರಬಹುದು.!

18/12/2025 9:40 AM

ಕಳೆದ ಮೂರು ವರ್ಷಗಳಲ್ಲಿ 45 ಬಸ್ ಅಗ್ನಿ ದುರಂತ: 64 ಮಂದಿ ಸಾವು: ರಾಜ್ಯಸಭೆಗೆ ಕೇಂದ್ರ ಸರ್ಕಾರ ಮಾಹಿತಿ

18/12/2025 9:20 AM
State News
KARNATAKA

BIG NEWS : ಪ್ರಧಾನಿ ಮೋದಿ ಆಡಳಿತದಲ್ಲಿ ದೇಶದ ಸಾಲ `200 ಲಕ್ಷ ಕೋಟಿ’ ರೂ.ಗೆ ಏರಿಕೆ : CM ಸಿದ್ದರಾಮಯ್ಯ

By kannadanewsnow5718/12/2025 9:43 AM KARNATAKA 2 Mins Read

ಬೆಳಗಾವಿ : ಮನಮೋಹನ್ ಸಿಂಗ್ ಅವರು ದೇಶದ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ದೇಶದ ಸಾಲ ಸುಮಾರು ₹53.11 ಲಕ್ಷ ಕೋಟಿ ಆಗಿತ್ತು.…

ALERT : ಕಣ್ಣು ಮಿಟಿಕಿಸದೇ ‘ಮೊಬೈಲ್’ನೋಡುವವರೇ ಎಚ್ಚರ : ಈ ಗಂಭೀರ ಸಮಸ್ಯೆ ಬರಬಹುದು.!

18/12/2025 9:40 AM

BREAKING: ಶಿವಮೊಗ್ಗ ಸೆಂಟ್ರಲ್ ಜೈಲ್ ನಿಂದ ಧರ್ಮಸ್ಥಳ ಮಾಸ್ಕ್ ಮ್ಯಾನ್ `ಬುರುಡೆ ಚಿನ್ನಯ್ಯ’ ರಿಲೀಸ್.!

18/12/2025 9:18 AM

BIG NEWS ಇಂದು `CM ಸಿದ್ದರಾಮಯ್ಯ’ಗೆ ಇಂದು ಬಿಗ್ ಡೇ : : ‘ಮುಡಾ ಹಗರಣ ಕೇಸ್’ ಕ್ಲೀನ್ ಚಿಟ್ ಬಗ್ಗೆ ಕೋರ್ಟ್ ನಿಂದ ತೀರ್ಪು | Muda Scam Case

18/12/2025 9:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.