ತುಮಕೂರು: ಕೋಟಿಗಟ್ಟಲೇ ಆಸ್ತಿ ಇದ್ದರೂ ಬಿಪಿಎಲ್ ಕಾರ್ಡ್ ಪಡೆದು ಸರ್ಕಾರದ ಉಚಿತ ರೇಷನ್ ಪಡೆಯುತ್ತಿದ್ದ ಶಿರಾ ನಗರ ಸಭೆಯ ಜೆಡಿಎಸ್ ಸದಸ್ಯ ರವಿಶಂಕರ್ ಆಯ್ಕೆಯನ್ನು ಶಿರಾ ಜೆಎಂಎಫ್ಸಿ ನ್ಯಾಯಾಲಯ (JMFC Court) ಅಸಿಂಧುಗೊಳಿಸಿ ಆದೇಶ ಹೊರಡಿಸಿದೆ.
ಚೆಕ್ ಬೌನ್ಸ್, ಕೋಮು ಗಲಭೆ ಸೃಷ್ಟಿ, ಅಪಘಾತ ಪ್ರಕರಣಗಳು ರವಿಶಂಕರ್ ಮೇಲೆ ದಾಖಲಾಗಿತ್ತು. ನಾಮಪತ್ರ ಸಲ್ಲಿಸುವಾಗ ಅಭ್ಯರ್ಥಿಗಳು ತಮ್ಮ ಮೇಲೆ ದಾಖಲಾಗಿರುವ ಎಲ್ಲಾ ಪ್ರಕರಣಗಳ ವಿವರಗಳನ್ನು ಅಫಿಡವಿಟ್ನಲ್ಲಿ ಉಲ್ಲೇಖಿಸದೇ ಕಾನೂನಿಗೆ ಮೋಸ ಮಾಡಿದ್ದರು ಎನ್ನುವ ಆರೋಪ ಕೇಳಿ ಬಂದಿತು. ಈ ನಡುವೆ ರವಿಶಂಕರ್ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ನಾಮಪತ್ರದಲ್ಲಿ ತನ್ನ ಬಳಿ 4 ಕೋಟಿ ರೂ. ಮೌಲ್ಯದ ಆಸ್ತಿ ಇದೆ ಎಂದು ಹೇಳಿದ್ದರು ಕೂಡಬಿಪಿಎಲ್ ಕಾರ್ಡ್ ಪಡೆದು ಸರ್ಕಾರದ ಉಚಿತ ರೇಷನ್ ಪಡೆಯುತ್ತಿದ್ದರು.
ಈ ಬಗ್ಗೆ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ ಕೋರ್ಟ್ ಮೆಟ್ಟಿಲೇರಿ ಸುಳ್ಳು ಮಾಹಿತಿ ನೀಡಿರುವ ಬಗ್ಗೆ ನ್ಯಾಯಾಲಯದಲ್ಲಿ ಪ್ರಕರಣ ಹೂಡಿದ್ದರು, . 2021ರ ಡಿಸೆಂಬರ್ ನಲ್ಲಿ ನಡೆದ ಚುನಾವಣೆಯಲ್ಲಿ ಆಯ್ಕೆಯಾದ ರವಿಶಂಕರ್ ಸದಸ್ಯತ್ವ ಅನೂರ್ಜಿತಗೊಳಿಸಬೇಕು ಎಂದು ಮನವಿ ಮಾಡಿದ್ದರು, ವಾದ ವಿವಾದ ಆಲಿಸಿದ ಕೋರ್ಟ್ ಜೆಡಿಎಸ್(JDS) ಸದಸ್ಯ ರವಿಶಂಕರ್ ಆಯ್ಕೆಯನ್ನು ಅಸಿಂಧುಗೊಳಿಸಿ ಆದೇಶ ಹೊರಡಿಸಿದೆ.