ಬೆಂಗಳೂರು : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಅವಾಚ್ಯ ಪದ ಬಳಕೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಖುದ್ದು ಸಿಐಡಿ ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ಎಂಎಲ್ ಸಿ ಸಿ.ಟಿ. ರವಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೋಟಿಸ್ ಜಾರಿಗೊಳಿಸಿದೆ.
ಸಿ.ಟಿ. ರವಿ ಅವರು ಸಿಐಡಿ ತನಿಖೆಗೆ ಅಸಹಕಾರ ತೋರಿದ ಆರೋಪದ ಹಿನ್ನೆಲೆಯಲ್ಲಿ ಶುಕ್ರವಾರ ಖುದ್ದು ವಿಚಾರಣೆಗೆ ಹಾಜರಾಗುವಂತೆ ಜನಪ್ರತಿನಿಧಿಗಳ ನ್ಯಾಯಾಲಯ ನೋಟಿಸ್ ಜಾರಿಗೊಳಿಸಿದೆ.
ಬೆಳಗಾವಿ ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಅಸಂಸದೀಯ ಪದ ಬಳಸಿ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಐಡಿ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಧ್ವನಿ ಪರೀಕ್ಷೆಗೆ ಸಿ.ಟಿ ರವಿ ವಿರೋಧಿಸಿದ್ದರು. ಹೀಗಾಗಿ ಅಸಹಕಾರ ತೋರಿದ್ದಾರೆಂದು ಕೋರ್ಟ್ ಗೆ ಸಿಐಡಿ ಅಧಿಕಾರಿಗಳು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಕೈಗೆತ್ತಿಕೊಂಡ ಕೋರ್ಟ್ ನೋಟಿಸ್ ನೀಡಿದೆ.