ಬೆಂಗಳೂರು:ರಾಜ್ಯಾದ್ಯಂತ ಸ್ಮಶಾನಗಳು ಕೋವಿಡ್ ರೋಗಿಗಳ ಅಂತಿಮ ಸಂಸ್ಕಾರವನ್ನು ನಡೆಸಲು ನಿರಾಕರಿಸದಂತೆ ನೋಡಿಕೊಳ್ಳಲು ಆರೋಗ್ಯ ಇಲಾಖೆ ಸ್ಥಳೀಯ ನಾಗರಿಕ ಸಂಸ್ಥೆಗಳು ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗೆ ನಿರ್ದೇಶನ ನೀಡಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಹೊರಡಿಸಿದ ಸುತ್ತೋಲೆಯಲ್ಲಿ, ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ಸ್ಮಶಾನ ಸಿಬ್ಬಂದಿ ಅಂತಿಮ ಸಂಸ್ಕಾರವನ್ನು ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದೆ.
ಸ್ಮಶಾನದ ಸಿಬ್ಬಂದಿಗೆ ಎನ್-95 ಮಾಸ್ಕ್‌ಗಳು, ಪಿಪಿಇ ಕಿಟ್‌ಗಳು ಮತ್ತು ಕೈಗವಸುಗಳನ್ನು ಆಚರಣೆಗಳನ್ನು ಮಾಡುವಾಗ ಬಳಸಲು ಸೂಚಿಸಲಾಗಿದೆ. ವೈರಸ್ ಹರಡುವುದನ್ನು ತಡೆಗಟ್ಟಲು ಇವುಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಸ್ಥಳೀಯ ಅಧಿಕಾರಿಗಳಿಗೆ ತಿಳಿಸಲಾಗಿದೆ.