ಬೆಂಗಳೂರು : ಬಿಜೆಪಿಗೆ ಕೈಕೊಟ್ಟು ಕಾಂಗ್ರೆಸ್ ಪಕ್ಷ ಸೇರ್ಪಡೆಯಾದ ಸಿಪಿ ಯೋಗೇಶ್ವರ್ ಅವರು ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂದು ಅವರೇ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ ನಾಳೆ ಬೃಹತ್ ಮೆರವಣಿಗೆಯೊಂದಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಪಕ್ಷದ ಬಾವುಟ ನೀಡಿ ಸಿಪಿ ಯೋಗೇಶ್ವರ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಇವಳೆ ಡಿಕೆ ಶಿವಕುಮಾರ್ ಅವರು ಇಂದು ಸಂಜೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದೆ. ಹಾಗಾಗಿ ನಾಳೆ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.
ನಾಳೆ ಬೆಳಿಗ್ಗೆ 11 ಗಂಟೆಗೆ ಚನ್ನಪಟ್ಟಣ ತಾಲೂಕು ಕಚೇರಿಗೆ ಬೃಹತ್ ಮೆರವಣಿಗೆಯೊಂದಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.ಸಿಪಿ ಯೋಗೇಶ್ವರ್ ಅವರಿಗೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಂಸದ ಡಿಕೆ ಸುರೇಶ್ ಸೇರಿದಂತೆ ಕಾಂಗ್ರೆಸ್ ನಾಯಕರು ಸಾಥ್ ನೀಡಲಿದ್ದಾರೆ.