ಬೆಂಗಳೂರು : ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ, ಮಂಡ್ಯ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ||ಕೆ.ಮೋಹನ್ ಇವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ ಎಂದು ಮಂಡ್ಯ ಆರೋಗ್ಯ ಇಲಾಖೆಯಿಂದ ಮೈಸೂರು ಗ್ರಾಮಾಂತರ ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡಿರುವ ನಕಲಿ ಪತ್ರದ ಕುರಿತು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಟ್ವೀಟ್‌ನಲ್ಲಿ ಹಂಚಿಕೊಂಡಿರುವ ಅವರು, ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ, ಮಂಡ್ಯ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ||ಕೆ.ಮೋಹನ್ ಇವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಅಪಪ್ರಚಾರದಲ್ಲಿ ತೊಡಗಿರುವುದು ಖಂಡನೀಯ ಮತ್ತು ಅತ್ಯಂತ ಗಂಭೀರ ಸ್ವರೂಪದ ಅಪರಾಧವಾಗಿದೆ.
ಈ ಬಗ್ಗೆ ನನ್ನ ಸಚಿವಾಲಯದ ಅಧಿಕಾರಿಗಳು ದೂರು ದಾಖಲಿಸಿದ್ದು, ಪೊಲೀಸ್ ಇಲಾಖೆ ಇದರ ಹಿಂದಿರುವ ದುಷ್ಟರನ್ನು ಪತ್ತೆ ಮಾಡಿ, ಕಾನೂನು ಕ್ರಮ ಕೈಗೊಳ್ಳಲಿದೆ. ಇಂತಹ ನಕಲಿ ಸುದ್ದಿಗಳನ್ನು ನಂಬಿ ಶೇರ್ ಮಾಡುವ ಮುನ್ನ ಜಾಲತಾಣ ಬಳಕೆದಾರರು ಎಚ್ಚರಿಕೆ ವಹಿಸಬೇಕು. ಈಗಿನ ಫೋಟೋಶಾಪ್/ಎಐ ಯುಗದಲ್ಲಿ ವಾಟ್ಸಪ್ ಮಾಹಿತಿಗಳ ಸತ್ಯಾಸತ್ಯತೆಯನ್ನು ಪರಾಮರ್ಶಿಸದೇ ಇತರರ ಜೊತೆ ಹಂಚಿಕೊಳ್ಳುವುದು ಕೂಡ ಅಪರಾಧವೇ ಆಗಿದೆ. ಸಕಾರಾತ್ಮಕ ಟೀಕೆಗೆ ನಾವು ಮುಕ್ತರಿದ್ದೇವೆ, ಸುಳ್ಳು ಸುದ್ದಿಗಳ ಅಪಪ್ರಚಾರವನ್ನು ಸಹಿಸುವುದಿಲ್ಲ ಎಂದು ಬರೆದುಕೊಂಡಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸಿಎಂ ಶಿಫಾರಸು ಪತ್ರ ಸಹಿತ ಸುನೀಲ್ ಕುಮಾರ್ ಆರೋಪ ಮಾಡಿದ್ದು, ಸಿಎಂ ಸಿದ್ದರಾಮಯ್ಯ ಅವರ ಹಳಿ ತಪ್ಪಿದ ಆಡಳಿತದ ಕ್ಲಾಸಿಕ್ ಉದಾಹರಣೆಯಾಗಿದೆ. ಮಂಡ್ಯ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯನ್ನು ಮೈಸೂರು ಗ್ರಾಮಾಂತರ ಜಿಲ್ಲೆ ಅಬಕಾರಿ ಡಿಸಿಯಾಗಿ ನಿಯೋಜಿಸುವಂತೆ ಖುದ್ದು ಮುಖ್ಯಮಂತ್ರಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದು ನಿರ್ದೇಶನ ನೀಡಿದ್ದಾರೆ ಎಂದು ಆರೋಪಿಸಿದ್ದರು.
ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ, ಮಂಡ್ಯ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ||ಕೆ.ಮೋಹನ್ ಇವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು, ಅಪಪ್ರಚಾರದಲ್ಲಿ ತೊಡಗಿರುವುದು ಖಂಡನೀಯ ಮತ್ತು ಅತ್ಯಂತ… pic.twitter.com/yr3kvPMF5o
— Siddaramaiah (@siddaramaiah) February 13, 2026








