ಬೆಂಗಳೂರು : ಬ್ರಿಟಿಷ್ ಕಾಲದ ಪೊಲೀಸ್ ಸಿಬ್ಬಂದಿಗಳ ಟೋಪಿಗೆ ಬ್ರೇಕ್ ಬೀಳುವ ಸಾಧ್ಯತೆ ಇದ್ದು, ರಾಜ್ಯದ ಹೆಡ್ ಕಾನ್‌ಸ್ಟೆಬಲ್‌ಗಳು, ಕಾನ್‌ಸ್ಟೆಬಲ್‌ಗಳು ಧರಿಸುತ್ತಿರುವ ಸ್ಲೋಚ್ ಹ್ಯಾಟ್ ಅನ್ನು ಬದಲಾವಣೆ ಮಾಡಲು ರಾಜ್ಯ ಪೊಲೀಸ್ ಇಲಾಖೆ ಮುಂದಾಗಿದೆ. ಈ ಹಿನ್ನೆಲೆ ಬೆಂಗಳೂರಿನಲ್ಲಿ ನಾಳೆ ಬೆಳಿಗ್ಗೆ 11:30ಕ್ಕೆ ಸಭೆ ನಡೆಯಲಿದೆ. ಕೆಎಸ್ಆರ್‌ಪಿ ಎಡಿಜಿಪಿ ಉಮೇಶ್ ಕುಮಾರ್ ನೇತೃತ್ವದಲ್ಲಿ ಸಭೆ ನಡೆಯಲಿದೆ.
ಕಾನ್‌ಸ್ಟೆಬಲ್‌ಗಳು ಆರಂಭದಲ್ಲಿ ಟರ್ಬನ್ ಮಾದರಿಯ ಟೋಪಿ ಬಳಸುತ್ತಿದ್ದರು. ಪ್ರಸ್ತುತ ಬಳಸುತ್ತಿರುವ ಟೋಪಿಯನ್ನು ಆರ್.ಗುಂಡೂರಾವ್ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಆರಂಭಿಸಲಾಗಿತ್ತು. ಹಳೆ ಮಾದರಿಯ ಟೋಪಿ ಬಳಕೆಯಿಂದ ಕಾನ್‌ಸ್ಟೆಬಲ್‌ಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ.
ಪ್ರತಿಭಟನೆ, ರ್‍ಯಾಲಿ ವೇಳೆ ಈ ಟೋಪಿ ಧರಿಸಿ, ಕರ್ತವ್ಯ ನಿರ್ವಹಣೆ ಕಷ್ಟ. ಟೋಪಿ ಕೆಳಕ್ಕೆ ಬಿದ್ದರೆ ಸಮವಸ್ತ್ರಕ್ಕೆ ಅಗೌರವ ತೋರಿದಂತಾಗುತ್ತದೆ. ಆದ್ದರಿಂದ, ಹಳೆ ಮಾದರಿಯ ಟೋಪಿ ಬದಲಿಗೆ ಗಟ್ಟಿಯಾಗಿ ನಿಲ್ಲುವಂತಹ ಟೋಪಿ ನೀಡಿದರೆ ಉತ್ತಮ ಎಂದು ಕಾನ್‌ಸ್ಟೆಬಲ್‌ಗಳು ಕೋರಿದ್ದರು.