ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್, ಏಪ್ರಿಲ್ 1 ರಿಂದ ರಾಜ್ಯದಲ್ಲಿ ವಿದ್ಯುತ್ ದರ ಪ್ರತಿ ಯೂನಿಟ್ ಗೆ 36 ಪೈಸೆ ಹೆಚ್ಚಳ ಮಾಡಿ ಕೆಇಆರ್ ಸಿ ಆದೇಶ ಹೊರಡಿಸಿದೆ.
ಹೌದು, ಪ್ರತಿ ಯೂನಿಟ್ ಗೆ 36 ಪೈಸೆಯಂತೆ ವಿದ್ಯುತ್ ದರ ಹೆಚ್ಚಳ ಮಾಡಲಾಗಿದೆ. ವಿದ್ಯುತ್ ಪ್ರಸರಣ ಮತ್ತು ಎಸ್ಕಾಂ ಸಿಬ್ಬಂದಿ ಪಿಂಚಣಿ ಗ್ರ್ಯಾಚುಟಿ ಹಣವನ್ನು ಗ್ರಾಹಕರಿಂದ ವಸೂಲಿಗೆ ಮುಂದಾಗಿರುವ ಕೆಇಆರ್ ಸಿ, ವಿದ್ಯುತ್ ದರ 36 ಪೈಸೆ ಹೆಚ್ಚಿಸಿದೆ.ಏಪ್ರಿಲ್ 1ರಿಂದಲೇ ಕೆಇಆರ್ ಸಿ ಹೊಸ ದರ ಜಾರಿಗೆ ಬರಲಿದೆ ಎಂದು ಹೇಳಲಾಗಿದೆ.
ಬೆಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ), ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ (ಮೆಸ್ಕಾಂ), ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್), ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಹೆಸ್ಕಾಂ), ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಜೆಸ್ಕಾಂ). ಈ ವಿಭಾಗಗಳ ವಿದ್ಯುತ್ ಬೆಲೆ ಹೆಚ್ಚಳವಾಗಲಿದೆ.
ಈ ಕುರಿತು ಸಚಿವ ಶರಣಪ್ರಕಾಶ್ ಪಾಟೀಲ ಸ್ಪಷ್ಟನೆ ನೀಡಿದ್ದು, ವಿದ್ಯುತ್ ದರ ಏರಿಕೆಯಿಂದ ಸಾಮಾನ್ಯ ಜನರಿಗೆ ತೊಂದರೆ ಆಗುವುದಿಲ್ಲ. ಗೃಹಜ್ಯೋತಿ ಯೋಜನೆಯಿಂದಾಗಿ ನಷ್ಟ ಆಗಿಲ್ಲ. ಗೃಹಜ್ಯೋತಿ ನಷ್ಟದಿಂದ ವಿದ್ಯುತ್ ದರ ಏರಿಕೆ ಮಾಡಲಾಗಿಲ್ಲ. ನಾವು 200 ಯೂನಿಟ್ ವಿದ್ಯುತ್ ಉಚಿತ ಕೊಟ್ಟಿದ್ದೇವೆ. 200 ಯೂನಿಟ್ ಮೇಲೆ ಬಳಸಿದವರಿಗೆ ದರ ಏರಿಕೆ ಅನ್ವಯವಾಗುತ್ತದೆ