ಬೆಂಗಳೂರು : ಕಳೆದ ವರ್ಷ ಬಿರು ಬೇಸಿಗೆಯಲ್ಲೂ ಕೂಡ ಕಾವೇರಿ ನದಿಯಿಂದ ತಮಿಳುನಾಡಿಗೆ ರಾಜ್ಯ ಸರ್ಕಾರ ನೀರು ಬಿಟ್ಟಿತ್ತು. ಇದೀಗ ಮತ್ತೆ 2.5 ಟಿಎಂಸಿ ನೀರು ಹರಿಬಿಡುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.
ಹೌದು ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಈ ಕುರಿತಂತೆ ಸೂಚನೆ ನೀಡಿದ್ದು, ಮೇ ತಿಂಗಳ ಭಾಗವಾಗಿ 2.5 ಟಿಎಂಸಿ ನೀರು ಹರಿಸಲು ಇದೀಗ ನಿರ್ದೇಶನ ನೀಡಿದೆ ಎಂದು ತಿಳಿದು ಬಂದಿದೆ.ಈ ಹಿಂದೆ ಕಾವೇರಿ ನೀರು ನಿಯಂತ್ರಣ ಸಮಿತಿ ಸಹ 2.5 ಟಿಎಂಸಿ ನೀರು ಹರಿಸುವಂತೆ ಶಿಫಾರಸು ಮಾಡಿತ್ತು. ಇದೀಗ ಇಂದು ಸಭೆ ನಡೆಸಿದ CWMA ನೀರುಹರಿಸಲು ನಿರ್ದೇಶನ ನೀಡಿದೆ ಎಂದು ತಿಳಿದುಬಂದಿದೆ.
ಕನ್ನಡಪರ ಸಂಘಟನೆಗಳ ಹೋರಾಟ
ಕಳೆದ ಬಾರಿ ನಮ್ಮ ರಾಜ್ಯದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದರೂ ಕೂಡ ಕಾವೇರಿ ನದಿಯಿಂದ ತಮಿಳುನಾಡಿಗೆ ರಾಜ್ಯ ಸರ್ಕಾರ ಹಲವಾರು ಬಾರಿ ನೀರು ಬಿಟ್ಟಿತು. ಈ ಕುರಿತಾಗಿ ಅನೇಕ ರೈತ ಸಂಘಟನೆಗಳು ಹಾಗೂ ಕನ್ನಡಪರ ಸಂಘಟನೆಗಳು ಹೋರಾಟ ನಡೆಸಿದ್ದವು.ಅಲ್ಲದೆ ರಾಜ್ಯವನ್ನು ಬಂದ್ ಮಾಡಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸಿದವು ಇದೀಗ ಮತ್ತೆ ಸಿಡಬ್ಲ್ಯೂಎಂಎ ತಮಿಳುನಾಡಿಗೆ 2.5 ಟಿಎಂಸಿ ನೀರು ಬಿಡುವಂತೆ ಸೂಚನೆ ನೀಡಿದೆ.