ನವದೆಹಲಿ : ಕಳೆದ ವರ್ಷ ಮಳೆಬಾರದೇ ಇರುವುದರಿಂದ ರಾಜ್ಯ ತೀವ್ರ ಸಂಕಷ್ಟ ಎದುರಿಸಿದೆ ಅದರಲ್ಲೂ ರೈತರು ಬೆಳೆ ಬೆಳೆಯಕ್ಕೆ ಆಗದೆ ಅತ್ಯಂತ ಸಂಕಷ್ಟವನ್ನು ಎದುರಿಸಿದ್ದರು ಈ ಮಧ್ಯೆ ಕಳೆದ ವರ್ಷ ಕೂಡ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯವಾಗಿತ್ತು. ಇದೀಗ ಮತ್ತೆ ಸಿ ಡಬ್ಲ್ಯೂ ಆರ್ ಸಿ ಕರ್ನಾಟಕಕ್ಕೆ ಶಿಫಾರಸು ಮಾಡಿದ್ದು ಫೆಬ್ರವರಿ ಮಾರ್ಚ್ ನಲ್ಲಿ 2.5 TMC ನಂತೆ ಒಟ್ಟು 5 TMC ನೀರನ್ನು ತಮಿಳುನಾಡಿಗೆ ಹರಿಸುವಂತೆ ಶಿಫಾರಸು ಮಾಡಿದೆ.
ಫೆಬ್ರವರಿ ಮತ್ತು ಮಾರ್ಚ ತಿಂಗಳಲ್ಲಿ ತಮಿಳುನಾಡಿಗೆ ತಲಾ 2.5 ಟಿಎಂಸಿ (ಒಟ್ಟೂ 5 ಟಿಎಂಸಿ) ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲುಆರ್ಸಿ) ಕರ್ನಾಟಕಕ್ಕೆ ಶಿಫಾರಸ್ಸು ಮಾಡಿದೆ ಎಂದು ತಿಳಿದುಬಂದಿದೆ.
ದೆಹಲಿಯಲ್ಲಿ ಸೋಮವಾರ ಸಮಿತಿಯ ಸಭೆ ನಡೆಯಿತು. 7.61 ಟಿಎಂಸಿ ಬಾಕಿ ಜೊತೆಗೆ, ಫೆಬ್ರವರಿ ಯಿಂದ ಮೇ ತಿಂಗಳವರೆಗೆ ಪ್ರತಿ ತಿಂಗಳು 2.5 ಟಿಎಂಸಿ ನೀರು ಹರಿಸಲು ಕರ್ನಾಟಕಕ್ಕೆ ಸೂಚಿಸಬೇಕು ಎಂದು ತಮಿಳುನಾಡು ಒತ್ತಾಯಿಸಿತು.
ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಕರ್ನಾಟಕದ ಅಧಿಕಾರಿಗಳು, 2023ರ ಜೂನ್ 1ರಿಂದ 2024ರ ಫೆಬ್ರವರಿ 9ರವರೆಗೆ ಕರ್ನಾಟಕದ ಕಾವೇರಿ ಕೊಳ್ಳದ 4 ಜಲಾಶಯಗಳಲ್ಲಿ 52.43%ರಷ್ಟು ಒಳಹರಿವಿನ ಕೊರತೆಯಿದೆ. ಜೊತೆಗೆ, ರಾಜ್ಯದಲ್ಲಿ ತೀವ್ರ ಬರವಿದೆ. ಹೀಗಾಗಿ, ನೀರು ಬಿಡುಗಡೆ ಸಾಧ್ಯವಿಲ್ಲ. ಸಂಕಷ್ಟ ಸೂತ್ರವನ್ನು ಪರಿಗಣನೆಗೆ ತೆಗೆದು ಕೊಳ್ಳಬೇಕೆಂದು ವಾದಿಸಿದರು.
ವಾದ-ಪ್ರತಿವಾದ ಆಲಿಸಿದ ಸಮಿತಿ, ನ್ಯಾಯಾಧಿಕರಣದ ಸೂಚನೆಯಂತೆ ಫೆಬ್ರವರಿ ಮತ್ತು ಮಾರ್ಚ್ನಲ್ಲಿ ತಮಿಳುನಾಡಿಗೆ ತಲಾ 2.5 (ಒಟ್ಟೂ 5) ಟಿಎಂಸಿ ನೀರು ಹರಿಸಲು ಶಿಫಾರಸ್ಸು ಮಾಡಿ ಮಾಡಿತು. ಸಮಿತಿಯ ಈ ಶಿಫಾರಸ್ಸನ್ನು ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರದ ಮುಂದೆ ಪ್ರಶ್ನಿಸಲು ಕರ್ನಾಟಕ ನಿರ್ಧರಿಸಿದೆ.