ಬೆಂಗಳೂರು : ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಇದೀಗ 5ಕ್ಕೆ ಏರಿಕೆಯಾಗಿದೆ. ರಾತ್ರಿ ಚಿಕಿತ್ಸೆ ಫಲಿಸದೆ ಮತ್ತೆ ಇಬ್ಬರು ಗಾಯಾಳುಗಳು ಸಾವನ್ನಪ್ಪಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಇಬ್ಬರು ಗಾಯಾಳುಗಳು ಸಾವನಪ್ಪಿದ್ದಾರೆ. ನಿನ್ನೆ ಬೆಳಿಗ್ಗೆ ಚಿಕಿತ್ಸೆ ಫಲಿಸದೆ ಮೂವರು ಕಾರ್ಮಿಕರು ಮೃತಪಟ್ಟಿದ್ದರು.
ಹೌದು ಬಿಡದಿ ಬಳಿಯ ಭೀಮನಹಳ್ಳಿ ಗ್ರಾಮದ ಶೆಡ್‌ವೊಂದರಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಸಂಭವಿಸಿದ್ದ ಅಗ್ನಿ ದುರಂತದಲ್ಲಿ ಗಾಯಗೊಂಡಿದ್ದ 7 ಕಾರ್ಮಿಕರಲ್ಲಿ ಮೂವರು ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಮನುರುಲ್ ಶೇಖ್, ಜಾವಿದ್ ಅಲಿ ಹಾಗೂ ತಜ್‌ಬುಲ್ ಮೃತಪಟ್ಟವರೆಂದು ಗುರುತಿಸಲಾಗಿದೆ. ಇದೀಗ ಮತ್ತೆ ಇಬ್ಬರು ಸಾವನಪ್ಪಿದು ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.