ಗದಗ : ಗದಗದ ಸರ್ಕಾರಿ ಆಯುರ್ವೇದಿಕ್ ಆಸ್ಪತ್ರೆಯಲ್ಲಿ ಡಿ ಗ್ರೂಪ್ ನೌಕರ ಒಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗದಗದ ಬೆಟಿಗೇರಿಯಲ್ಲಿರುವ ಆಯುರ್ವೇದಿಕ್ ಆಸ್ಪತ್ರೆಯಲ್ಲಿ ಈ ಒಂದು ಘಟನೆ ನಡೆದಿದ್ದು, ಹೊರಗುತ್ತಿಗೆ ನೌಕರ ಮೈಲಾರಲಿಂಗೇಶ್ವರ ರಂಗಪ್ಪ (35) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೈಲಾರ ಲಿಂಗೇಶ್ವರ ರಂಗಪ್ಪ ಮೂಲತಃ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚಿಕ್ಕಮುದುರ ಗ್ರಾಮದ ನಿವಾಸಿಯಾಗಿದ್ದು ಈ ಒಂದು ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ ಮೈಲಾರ ಲಿಂಗೇಶ್ವರ ರಂಗಪ್ಪ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸದ್ಯ ಘಟನಾ ಸ್ಥಳಕ್ಕೆ ಬೆಟಗೇರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ








