ಬಳ್ಳಾರಿ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ನಟ ದರ್ಶನವರು ಬಳ್ಳಾರಿ ಜೈಲಿನಲ್ಲಿ ಇದ್ದು ಅವರಿಗೆ ತೀವ್ರವಾಗಿ ಬೆನ್ನು ನೋವಿನ ಸಮಸ್ಯೆ ಕಾಣಿಸಿಕೊಂಡಿದೆ. ಹಾಗಾಗಿ ಇಂದು ಅವರು ಕೊನೆಗೂ ಪತ್ನಿಯ ಮಾತಿಗೆ ಬೆಲೆ ಕೊಟ್ಟು, ಬೆನ್ನು ನೋವಿಗೆ ಚಿಕಿತ್ಸೆ ಪಡೆಯಲು ಒಪ್ಪಿಗೆ ಸೂಚಿಸಿದ್ದಾರೆ.
ಆದ್ದರಿಂದ ಇದೀಗ ಬಳ್ಳಾರಿಯ ಕೇಂದ್ರ ಕಾರಾಗೃಹದ ಪೊಲೀಸರು ನಟ ದರ್ಶನ್ ಅವರನ್ನು ವಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾರೆ. ನಟ ದರ್ಶನ್ ಅವರನ್ನ ಕರೆದುಕೊಂಡು ಹೋಗುವ ಮಾರ್ಗ ಮಧ್ಯೆ ರಸ್ತೆಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಇದಕ್ಕೂ ಮುನ್ನ ನಟ ದರ್ಶನ್ ಅವರನ್ನು ಭೇಟಿಯಾಗಲು ಪತ್ನಿ ವಿಜಯಲಕ್ಷ್ಮಿ ಹಾಗೂ ಭಾವ ಜೈಲಿಗೆ ಆಗಮಿಸಿದ್ದರು.ಈ ವೇಳೆ ಪತ್ನಿ ವಿಜಯಲಕ್ಷ್ಮಿ ಅವರು ನಟ ದರ್ಶನ್ ಅವರಿಗೆ ಚಿಕಿತ್ಸೆ ತೆಗೆದುಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ಹೀಗಾಗಿ ನಟ ದರ್ಶನ ಅವರು ಪತ್ನಿಯ ಮಾತಿಗೆ ಬೆಲೆ ಕೊಟ್ಟು ಚಿಕಿತ್ಸೆ ಪಡೆದುಕೊಳ್ಳಲು ಒಪ್ಪಿಗೆ ಸೂಚಿಸಿದ್ದಾರೆ.
ಇದೀಗ ನಟ ದರ್ಶನ್ ಅವರನ್ನು ಪೊಲೀಸರು ವಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾರೆ. MRI ಸ್ಕ್ಯಾನಿಂಗ್ ಮಾಡಿಸಲು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾರೆ.ವಿಮ್ಸ್ ಆಸ್ಪತ್ರೆಯ ನ್ಯೂರೋ ವಿಭಾಗದಲ್ಲಿ ಈ ಒಂದು ಸ್ಕ್ಯಾನಿಂಗ್ ನಡೆಯುತ್ತದೆ. ಮುನ್ನೆಚ್ಚರಿಕೆ ಕ್ರಮವಾಗಿ ದರ್ಶನ ಸಾಗುವ ರಸ್ತೆಯಲ್ಲಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ.