ಮಂಗಳೂರು : ನವರಾತ್ರಿ ಹಬ್ಬಕ್ಕೆ ಪೂರಕವಾಗುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ನೀಡಿದ ಮನವಿಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆ. 26 ರಿಂದ ಅ.10 ರವರೆಗೆ ದಸರಾ ರಜೆ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಶೈಕ್ಷಣಿಕ ಮಾರ್ಗಸೂಚಿಯಲ್ಲಿ ನಿಗಧಿಪಡಿಸಿದ ವೇಳಾಪಟ್ಟಿಯಲ್ಲಿ ಮಾರ್ಪಾಡು ಅಗತ್ಯವಿದ್ದಲ್ಲಿ ಸಂಬಂಧಿಸಿದ ಜಿಲ್ಲಾಧಿಕಾರಿಗಳು/ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಬದಲಾವಣೆಗಳನ್ನು ಮಾಡಿಕೊಳ್ಳಲು ಈಗಾಗಲೇ ಅನುಮತಿ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ಜಿಲ್ಲೆಯಲ್ಲಿ ದಸರೆ ರಜೆಯನ್ನು ನವರಾತ್ರಿ ಹಬ್ಬಕ್ಕೆ ಪೂರಕವಾಗುವಂತೆ ದಿನಾಂಕ 26-09-2022 ರಿಂದ 10-10-2022 ರವರೆಗೆ ದಸರೆ ರಜೆ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
BIGG NEWS : `PSI’ ನೇಮಕಾತಿ ಹಗರಣದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಕೂಡ ಜೈಲಿಗೆ ಹೋಗ್ತಾರೆ : ಬಿ.ಕೆ.ಹರಿಪ್ರಸಾದ್