ಬೆಂಗಳೂರು : ವಿಶ್ವ ವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಏಪ್ರಿಲ್ 1 ರಂದು ಮಧ್ಯರಾತ್ರಿ ಬೆಂಗಳೂರು ಕರಗ ನಡೆಯಲಿದೆ.
16ನೇ ಬಾರಿಗೆ ಜ್ಞಾನೇಂದ್ರಸ್ವಾಮಿ ಬೆಂಗಳೂರು ಕರಗ ಹೊರಲಿದ್ದಾರೆ. ಮಾರ್ಚ್ 24ರಂದು ಧ್ವಜಾರೋಹಣದ ಮೂಲಕ ಉತ್ಸವಕ್ಕೆ ಚಾಲನೆ ನೀಡಲಾಗುತ್ತದೆ. ಮಾರ್ಚ್ 31 ಹಸಿ ಕರಗ ನಡೆಯಲಿದ್ದು, ಒಟ್ಟು 11 ದಿನಗಳ ಕಾಲ ಬೆಂಗಳೂರು ಕರಗ ಶಕ್ತ್ಯೋತ್ಸವ ನಡೆಯಲಿದೆ.








