ಚಿಕ್ಕಮಗಳೂರು : ಚಿಕ್ಕಮಂಗಳೂರಿನ ಪ್ರಸಿದ್ಧ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ವಿವಾದ ಹಿನ್ನೆಲೆಯಲ್ಲಿ, ಸಂಪೂರ್ಣ ಹಿಂದೂ ಪೀಠಕ್ಕೆ ಆಗ್ರಹಿಸಿ ದತ್ತ ಜಯಂತಿ ಹಿನ್ನೆಲೆ ಇಂದಿನಿಂದ ಮೂರು ದಿನಗಳ ಕಾಲ ದತ್ತ ಜಯಂತಿ ಆಚರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಂಗಳೂರು ಜಿಲ್ಲೆಯಾದಂತ ಘೋಷಣೆ ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಜನತಾ ಈಗಾಗಲೇ 28 ಚೆಕ್ ಪೋಸ್ಟ್ಗಳನ್ನು ಸ್ಥಾಪನೆ ಮಾಡಲಾಗಿದೆ ಜಿಲ್ಲೆಗೆ ಪ್ರವೇಶಿಸುವ ಪ್ರತಿಯೊಂದು ವಾಹನಗಳ ತಪಾಸಣೆ ನಡೆಯಲಿದೆ ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಗಡಿ ಭಾಗದಲ್ಲಿ ಬಿಗಿ ಪೊಲೀಸ್ ಬದ್ಧತೆ ನಿಯೋಜನೆಗೊಳಿಸಲಾಗಿದೆ. ಕೊಟ್ಟಿಗೆಹಾರ ಬಳಿ ಸುಮಾರು 20ಕ್ಕೂ ಹೆಚ್ಚು ಪೋಲಿಸರನ್ನು ನಿಯೋಜಿಸಲಾಗಿದೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕೊಟ್ಟಿಗೆಹಾರದಲ್ಲಿ ಭದ್ರತೆ ನಿಯೋಜಿಸಲಾಗಿದೆ.








