ಬೆಂಗಳೂರು : ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಮಾವೇಶದಲ್ಲಿ ಪಾಲ್ಗೊಳ್ಳುವ ಸಲುವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಧ್ಯರಾತ್ರಿ ಸ್ವಿಜರ್‌ಲೆಂಡ್‌ನ ದಾವೋಸ್‌ಗೆ ಪ್ರಯಾಣ ಬೆಳೆಸಿದ್ದಾರೆ. ಜ.18ರಂದು ಶಿವಕುಮಾರ್ ಅವರು ದಾವೋಸ್ ಪ್ರವಾಸ ನಿಗದಿಯಾಗಿತ್ತು.
ಆದರೆ, ದೆಹಲಿಯಲ್ಲಿ ವರಿಷ್ಠರೊಂದಿಗಿನ ಸಭೆ ಹಿನ್ನೆಲೆಯಲ್ಲಿ ಪ್ರವಾಸ ರದ್ದು ಮಾಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಕೆಶಿ, ಸಿಎಂ ಸಿದ್ದರಾಮಯ್ಯ ಅವರು ಕೂಡ ದಾವೋಸ್‌ಗೆ ಹೋಗಲು ಹೇಳಿದ್ದಾರೆ. ವಿರೋಧ ಪಕ್ಷದ ಸ್ನೇಹಿತರೂ ನನಗೆ ಅದೇ ಸಲಹೆ ನೀಡುತ್ತಿದ್ದಾರೆ. ರಾಜ್ಯದ ಹಿತ ವಿಚಾರದಲ್ಲಿ ಕೆಲವೊಮ್ಮೆ ಅವರ ಸಲಹೆಗಳನ್ನು ಸ್ವೀಕರಿಸಬೇಕು ಎಂದರು.








