ಬೆಳಗಾವಿ : ಬೆಳಗಾವಿ ಜಿಲ್ಲೆಯ ಸೌದತ್ತಿ ತಾಲೂಕಿನ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀರಾಮ ಸೇನೆಯ ಜಿಲ್ಲಾಧ್ಯಕ್ಷ ಮೇಲೆ ಮರಣಾಂತಿಕವಾಗಿ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದ್ದು ಕರ್ತವ್ಯ ನಿರತ ಕಾನ್ಸ್ಟೆಬಲ್ ಶ್ರೀರಾಮ ಸೇನೆಯ ಜಿಲ್ಲಾಧ್ಯಕ್ಷನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.
ಧಾರವಾಡ ಜಿಲ್ಲಾಧ್ಯಕ್ಷ ಅಣ್ಣಪ್ಪನ ಮೇಲೆ ಈ ಒಂದು ಹಲ್ಲೆ ನಡೆದಿದ್ದು, ಅಣ್ಣಪ್ಪ ಮತ್ತು ಪತ್ನಿ ಮಗು ರೇಣುಕಾಯಲ್ಲಮ್ಮ ದೇವಸ್ಥಾನಕ್ಕೆ ದೇವಿ ದರ್ಶನಕ್ಕೆ ಬಂದಿದ್ದರು. ಈ ವೇಳೆ ದೇಗುಲದಲ್ಲಿ ಅಣ್ಣಪ್ಪನ ಪತ್ನಿ ಮಗುವಿಗೆ ತಿಂಡಿ ತಿನಿಸುತ್ತಿದ್ದರು. ದೇಗುಲದಲ್ಲಿ ತಿಂಡಿ ತಿನ್ನಿಸದಂತೆ ಗೃಹ ರಕ್ಷಕ ದಳ ಸಿಬ್ಬಂದಿ ಅವರಿಗೆ ಹೇಳಿದ್ದಾರೆ.
ಬಳಿಕ ದೇಗುಲದ ಹೊರಗೆ ಬಂದು ಪತಿ-ಪತ್ನಿ ಮಗುವಿಗೆ ತಿಂಡಿ ತಿನ್ನಿಸುತ್ತಿದ್ದಾರೆ. ಈ ವೇಳೆ ಪೊಲೀಸ್ ಸಿಬ್ಬಂದಿ ಅವಾಚ್ಯವಾಗಿ ನಿಂದಿಸಿದ ಆರೋಪ ಕೇಳಿ ಬಂದಿದ್ದು ಇದನ್ನು ಪ್ರಶ್ನೆ ಮಾಡಿದ ಅಣ್ಣಪ್ಪನ ಮೇಲೆ ಮರಣಾಂತಿಕವಾಗಿ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಈ ಕುರಿತು ಸೌದತ್ತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.