ದಾವಣಗೆರೆ : ಜಾತಿ ಗಣತಿಯ ಧರ್ಮದ ಕಾಲಂನಲ್ಲಿ ಲಿಂಗಾಯತ ಹಾಗೂ ಜಾತಿಯ ಕಾಲಂನಲ್ಲಿ ಉಪಪಂಗಡ ದಾಖಲಿಸುವಂತೆ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ತೀರ್ಮಾನ ಕೈಗೊಂಡಿದೆ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.
ಬಸವ ಸಂಸ್ಕೃತಿ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಸ್ವಾಮೀಜಿಗಳು, ಜಾತಿ ಗಣತಿಯ ಧರ್ಮದ ಕಾಲಂನಲ್ಲಿ ಲಿಂಗಾಯತ ಹಾಗೂ ಜಾತಿಯ ಕಾಲಂನಲ್ಲಿ ಉಪಪಂಗಡ ದಾಖಲಿಸುವಂತೆ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ತೀರ್ಮಾನ ಕೈಗೊಳ್ಳಲಾಗಿದ್ದು, ಜಾತಿ ಗಣತಿಯ ಧರ್ಮದ ಕಾಲಂನಲ್ಲಿ ಲಿಂಗಾಯತವೆಂದು ನಮೂದಿಸುವ ಅವಕಾಶವನ್ನು ಕೇಂದ್ರ ಸರ್ಕಾರ ಕಲ್ಪಿಸುತ್ತಿಲ್ಲ ಎಂಬ ಸುಳಿವು ಸಿಕ್ಕಿದೆ. ಧರ್ಮದ ಕಾಲಂನಲ್ಲಿ ಲಿಂಗಾಯತ ನಮೂದಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಅಗತ್ಯವಿದೆ ಎಂದರು.
ಲಿಂಗಾಯತ ಸಮುದಾಯದ ಹಲವು ಒಳಪಂಗಡಗಳು ಸರ್ಕಾರದ ಸೌಲಭ್ಯ ಪಡೆಯುತ್ತಿವೆ. ಜಾತಿ ಗಣತಿಯಲ್ಲಿ ಒಳಪಂಗಡ ನಮೂದಿಸದೇ ಇದ್ದರೆ ಈ ಸೌಲಭ್ಯ ಕೈತಪ್ಪುವ ಅಪಾಯವಿದೆ. ಹೀಗಾಗಿ, ಒಕ್ಕೂಟ ಈ ತೀರ್ಮಾನ ಕೈಗೊಂಡಿದೆ ಎಂದು ಹೇಳಿದ್ದಾರೆ.