ಬೆಂಗಳೂರು : ಬೆಂಗಳೂರಲ್ಲಿ ರಾಜಕಾಲುವೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಬೆಂಗಳೂರಿನ ಆರ್ ವಿ ಕಾಲೇಜು ಹಿಂಭಾಗ ರಾಜಕಾಲುವೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಕಳೆದ ಮೂರು ದಿನಗಳ ಹಿಂದೆ 35 ವರ್ಷದ ವ್ಯಕ್ತಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಕೊಳೆತ ಶವ ಕಂಡು ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಕೆಂಗೇರಿ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತಪಟ್ಟ ವ್ಯಕ್ತಿಯ ಎದೆಯ ಮೇಲೆ ಜಯ ಎಂದು ಹಚ್ಚೆ ಹಾಕಿಸಿಕೊಂಡಿರುವುದು ಪತ್ತೆಯಾಗಿದೆ. ಸದ್ಯ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹವನ್ನು ಸ್ಥಳಾಂತರಿಸಿದ್ದಾರೆ. ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಶವ ಶಿಫ್ಟ್ ಆಗಿದ್ದು ಪೊಲೀಸರು ಅನುಮಾನಾಸ್ಪದ ಸಾವು ಎಂದು ಕೇಸ್ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.