ಡ್ಯ : ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ನೈತಿಕ ಬೆಂಬಲ ನೀಡುವ ಸಲುವಾಗಿ ಆ.31ರಂದು ಜೆಡಿಎಸ್ ವತಿಯಿಂದ ಧರ್ಮಸ್ಥಳ ಸತ್ಯ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ಹಾಸನದಿಂದ ಜೆಡಿಎಸ್ ಶಾಸಕರು, ಮಾಜಿ ಶಾಸಕರು, ಮುಖಂಡರು, ಕಾರ್ಯಕರ್ತರು ಬಸ್‌ಗಳ ಮೂಲಕ ಧರ್ಮಸ್ಥಳಕ್ಕೆ ತೆರಳಿ ಬಳಿಕ ನೇತ್ರಾವತಿ ನದಿ ದಡದಿಂದ ಶ್ರೀ ಮಂಜುನಾಥನ ದೇವಾಲಯದವರೆಗೆ ಪಾದಯಾತ್ರೆ ನಡೆಸು ತ್ತೇವೆ. ಅಲ್ಲಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ನೈತಿಕ ಸ್ಟೈರ್ಯ ತುಂಬಲಾಗುವುದು ಎಂದು ತಿಳಿಸಿದರು.
ಜೆಡಿಎಸ್ ನಡೆಸುತ್ತಿರುವ ಯಾತ್ರೆ ಹಿಂದೆ ಯಾವುದೇ ರಾಜಕೀಯ ದುರುದ್ದೇಶವಿಲ್ಲ. ಇದರೊಳಗೆ ರಾಜಕಾರಣವನ್ನು ಬೆರೆಸುವುದೂ ಇಲ್ಲ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ಹಲವಾರು ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಕೋಟ್ಯಂತರ ಭಕ್ತರ ನಂಬಿಕೆಗೆ ಪಾತ್ರವಾಗಿರುವ ಧರ್ಮಸ್ಥಳ ಕ್ಷೇತ್ರದಪಾವಿತ್ರ್ಯತೆ ಕಾಪಾಡುವುದು ಮುಖ್ಯ ಉದ್ದೇಶವಾಗಿದೆ ಎಂದು ಸ್ಪಷ್ಟಪಡಿಸಿದರು.
ಬುರುಡೆ ಪ್ರಕರಣ ಸಂಘಟಿತ ಪಿತೂರಿಯಾಗಿದ್ದು, ಧರ್ಮಸ್ಥಳದ ಪಾವಿತ್ರ್ಯತೆಗೆ ಧಕ್ಕೆ ತರುವ ಸಂಚು ಕಂಡುಬರುತ್ತಿದೆ. ಪಿತೂರಿಗಾರರಿಗೆ ವಿದೇಶದಿಂದ ಹಣ ಹರಿದುಬರುತ್ತಿರುವ ಬಗ್ಗೆ ಮಾಹಿತಿ ಇದ್ದು, ಎನ್‌ಐಎ ತನಿಖೆಗೆ ವಹಿಸುವುದು ಸೂಕ್ತ ಎಂದು ಹೇಳಿದರು.