ಬೆಂಗಳೂರು : ಸದ್ಯ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ನಿನ್ನೆ ಒಂದೇ ದಿನ ರಾಜ್ಯದಲ್ಲಿ 424 ಹೊಸ ಪ್ರಕರಣಗಳು ದಾಖಲಾಗಿವೆ. ಬೆಂಗಳೂರಲ್ಲಿ 202 ಡೆಂಗ್ಯೂ ಕೇಸ್ಗಳು ದಾಖಲಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.
ಬೆಂಗಳೂರು: ಪರಿ ರಾಜ್ಯದಲ್ಲಿ ಶನಿವಾರ 2,557 ಮಂದಿಗೆ ಡೆಂಗೆ ಜ್ವರ ತಪಾಸಣೆ ನಡೆಸಿದ್ದು, ಈ ಪೈಕಿ 424 ಮಂದಿಗೆ ಡೆಂಗೆ ದೃಢಪಟ್ಟಿದೆ. ಇದರಿಂದ ಒಟ್ಟು ಪ್ರಕರಣಗಳ ಸಂಖ್ಯೆ 9,082ಕ್ಕೆ ಏರಿಕೆಯಾಗಿದೆ. ಈವರೆಗೆ ಡೆಂಗೆ ಜ್ವರದಿಂದ 7 ಮಂದಿ ಮೃತಪಟ್ಟಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ 202, ಧಾರವಾಡ, ಮಂಡ್ಯ, ಹಾಸನ, ದಕ್ಷಿಣ ಕನ್ನಡದಲ್ಲಿ ತಲಾ 20 ಡೆಂಗೆ ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ದಿನೇದಿನೆ ಡೆಂಗ್ಯೂ ಕೇಸ್ಗಳು ಹೆಚ್ಚುತ್ತಿವೆ. ಕೇವಲ ಮಕ್ಕಳನ್ನೇ ಟಾರ್ಗೆಟ್ ಮಾಡಿತ್ತಿರುವ ಡೆಂಗ್ಯೂ ಕಳೆದ ಹಲವು ದಿನಗಳ ಹಿಂದೆ ಚಿಕ್ಕ ಚಿಕ್ಕ ಮಕ್ಕಳು ಬಲಿಯಾಗಿದ್ದಾರೆ.ಇಂದು ವಿದ್ಯಾರ್ಥಿನಿಯನ್ನು ಬಲಿ ಪಡೆದಿದೆ. ಜೊತೆಗೆ ಮಕ್ಕಳನ್ನೇ ಟಾರ್ಗೆಟ್ ಮಾಡುತ್ತಿದೆ.
ಹಾಸನ, ಹಾವೇರಿ, ಚಿಕ್ಕಮಗಳೂರು ಕೆಲ ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಅದರಲ್ಲೂ ಬಿಟ್ಟು ಬಿಟ್ಟು ಬರುತ್ತಿರುವ ಮಳೆಯಿಂದ ಸೊಳ್ಳೆಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಡೆಂಗ್ಯೂಗೆ ಮತ್ತಷ್ಟು ಶಕ್ತಿ ನೀಡಿದಂತ್ತಾಗಿದೆ. ಹೀಗಿರುವಾಗಲೇ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ನಾಮಗೊಂಡ್ಲು ಗ್ರಾಮದಲ್ಲಿ ಶಂಕಿತ ಡೆಂಗ್ಯೂಗೆ ವಿದ್ಯಾರ್ಥಿ ಸಾವಾಗಿದೆ.
ಇನ್ನೂ ದಕ್ಷಿಣಕನ್ನಡದಲ್ಲೂ ಕೂಡ ಶಂಕಿತ ಜ್ವರಕ್ಕೆ ವ್ಯಕ್ತಿ ಬಲಿಯಾಗಿದ್ದು, ಪುತ್ತೂರು ತಾಲೂಕಿನ ಪಡ್ನೂರಿನ ಯತೀಶ್ (50) ಮೃತ ವ್ಯಕ್ತಿ. ಮೂಲತಃ ಬಂಟ್ವಾಳ ತಾಲೂಕಿನ ಶಂಭೂರು ನಿವಾಸಿ. ಜು.10 ರಂದು ಯತೀಶ್ಗೆ ಜ್ವರ ಕಾಣಿಸಿಕೊಂಡಿತ್ತು. ವಿಪರೀತ ಜ್ವರದಿಂದ ಬಳಲುತ್ತಿದ್ದ ಯತೀಶ್ರನ್ನು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.