ಬೆಂಗಳೂರು : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಳಿಕ ಇದೀಗ ಕೇಂದ್ರೀಯ ಬಿಜೆಪಿ ಶಿಸ್ತು ಸಮಿತಿಯು ಶಾಸಕರಾದ ಎಸ್ ಟಿ ಸೋಮಶೇಖರ್ ಹಾಗೂ ಶಾಸಕ ಶಿವರಾಂ ಹೆಬ್ಬಾರ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಿದೆ. ಈ ವಿಚಾರವಾಗಿ st ಸೋಮಶೇಖರ್ ಅವರು ಪ್ರತಿಕ್ರಿಯೆ ನೀಡಿ, ಡಿಸಿಎಂ ಅಡಿಕೆ ಶಿವಕುಮಾರ್ ಅವರು ರಾಜಕೀಯವಾಗಿ ನನ್ನನ್ನು ಬೆಳೆಸಿದ್ದಾರೆ ಎಂದು ಹೇಳಿಕೆ ನೀಡಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಎಸ್ ಟಿ ಸೋಮಶೇಖರ್ ಡಿಕೆ ಶಿವಕುಮಾರ್ ಅವರು ನನ್ನನ್ನು ರಾಜಕೀಯವಾಗಿ ಬೆಳೆಸಿದವರು. ಸಹಕಾರ ಕ್ಷೇತ್ರದಲ್ಲಿ ನಾನು ಬೆಳೆಯಲು ಡಿಕೆ ಶಿವಕುಮಾರ್ ಕಾರಣ. ಉತ್ತರಹಳ್ಳಿ ಟಿಕೆಟ್ ಸಿಗಲು ಡಿಕೆ ಶಿವಕುಮಾರ್ ಅವರೇ ಕಾರಣ. ಮಲ್ಲಿಕಾರ್ಜುನ ಖರ್ಗೆ ಜಿ. ಪರಮೇಶ್ವರ್ ಯಶವಂತಪುರದ ಕ್ಷೇತ್ರದ ಟಿಕೆಟ್ ಕೊಡಿಸಿದರು. ಹಿಂದೆ ಕಾಂಗ್ರೆಸ್ ನಲ್ಲಿದ್ದ ಕಾರಣಕ್ಕೆ ಅನುದಾನ ಕೇಳುವ ಕೆಲಸ ಮಾಡಿದೆ. ಅದರಿಂದಾಗಿ ಇವರು ಪಕ್ಷಕ್ಕೆ ಮುಜುಗರ ಆಗುತ್ತೆ ಎನ್ನುವುದಾದರೆ, ರೇಪ್ ಏಡ್ಸ್ ಇಂಜೆಕ್ಷನ್ ಯಾವುದು ಮುಜುಗರ ಅಲ್ಲವೇ? ಕ್ಷೇತ್ರದ ವಿಚಾರ ಸರಿಪಡಿಸದಿದ್ದರೆ ಪಕ್ಷದಲ್ಲಿ ಮುಂದುವರೆಯಲ್ಲ ಎಂದಿದ್ದೆ. ಅಮಿತ್ ಶಾ ನನ್ನ ಜೊತೆಗೆ ಮಾತನಾಡಿದಾಗ ಈ ಬಗ್ಗೆ ಹೇಳಿದ್ದೆ ಎಂದು ತಿಳಿಸಿದರು.
ಉಚ್ಚಾಟನೆಯಲ್ಲಿ ಬಿಎಸ್ ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರದ್ದು ಯಾವುದೇ ಪಾತ್ರ ಇಲ್ಲ. ಉಳಿದ ನಾಯಕರು ಯಾರು ಉಳಿಸಿಕೊಳ್ಳಲು ಪ್ರಯತ್ನ ಮಾಡಲಿಲ್ಲ. ನಾನಾಗಿ ಹೋಗಿ ಮೇಲೆ ಬಿದ್ದು ಕೇಳುವ ಮನಸ್ಸು ನನ್ನದಲ್ಲ. ರಾಜ್ಯಾಧ್ಯಕ್ಷರು ವಿಪಕ್ಷ ನಾಯಕರು ಉಳಿಸಿಕೊಳ್ಳುವ ಪ್ರಯತ್ನ ಮಾಡಲಿಲ್ಲ. ಇಬ್ಬರೂ ಕೂಡ 100% ನನ್ನ ಉಳಿಸಿಕೊಳ್ಳಲು ಪ್ರಯತ್ನ ಮಾಡಲಿಲ್ಲ. ಅವರು ಪ್ರಯತ್ನ ಮಾಡಿದ್ದರೆ ಇಂದು ನಾನು ಉಚ್ಚಾಟನೆ ಆಗುತ್ತಿರಲಿಲ್ಲ ಎಂದು ಎಸ್ ಟಿ ಸೋಮಶೇಖರ್ ತಿಳಿಸಿದರು.