ಬೆಂಗಳೂರು : ಸದ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಕುರಿತು ಚರ್ಚೆ ಜೋರಾಗಿದ್ದು, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವುಗಳಿಗೆ ಎಲ್ಲಾ ತೆರೆ ಎಳೆದಿದ್ದಾರೆ. ಏಕೆಂದರೆ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರೀಯ ಸಂದರ್ಶನದಲ್ಲಿ ಹೇಳಿಕೆ ನೀಡಿದ್ದು ಡಿಸಿಎಂ ಡಿಕೆ ಶಿವಕುಮಾರ್ ಕೂಡ ಸಿಎಂ ಆಕಾಂಕ್ಷಿ ಆಗಿದ್ದು ಅದರಲ್ಲಿ ತಪ್ಪೇನು ಇಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಹೌದು ರಾಷ್ಟ್ರೀಯ ಮಾಧ್ಯಮದ ಸಂದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ ಈ ಹೇಳಿಕೆ ನೀಡಿದ್ದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ಸಿಎಂ ಆಗುವ ಆಕಾಂಕ್ಷೆ ಹೊಂದಿದ್ದು, ಅದರಲ್ಲಿ ಯಾವುದೇ ತಪ್ಪಿಲ್ಲ ಅಲ್ಲದೆ ಡಿಕೆ ಶಿವಕುಮಾರ್ ಅವರು ಕೂಡ ಸದ್ಯ ಸಿಎಂ ಕುರ್ಚಿ ಖಾಲಿ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ. ಹಾಗಾಗಿ ಅವರು ಸಿಎಂ ಆಕಾಂಕ್ಷಿಯಲ್ಲಿರುವುದು ತಪ್ಪೇನು ಇಲ್ಲ ಎಂದು ಎಲ್ಲಾ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ಅಲ್ಲಗಳೆದು ಸ್ಪಷ್ಟನೆ ನೀಡಿದ್ದಾರೆ.
ಕೆಲವು ಶಾಸಕರು ಡಿಕೆ ಶಿವಕುಮಾರ್ ಅವರನ್ನು ಬೆಂಬಲಿಸುತ್ತಿದ್ದಾರೆ. ಹೆಚ್ಚಿನ ಶಾಸಕರೇನೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಬೆಂಬಲಿಸಿಲ್ಲ. ಅಧಿಕಾರ ಹಂಚಿಕೆಯ ಬಗ್ಗೆ ಯಾವ ಚರ್ಚೆಯು ಕೂಡ ಆಗಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಹೈಕಮಾಂಡ್ ಏನು ನಿರ್ಧಾರ ಮಾಡುತ್ತದೆಯೋ ನಾನು ಅದಕ್ಕೆ ಬದ್ಧನಾಗಿದ್ದೇನೆ. ನಾನಾಗಲಿ ಡಿಸಿಎಂ ಡಿಕೆ ಶಿವಕುಮಾರ್ ಆಗಲಿ ಹೈಕಮಾಂಡ್ ಹೇಳುವುದನ್ನು ಪಾಲನೆ ಮಾಡಲೇಬೇಕು. ಡಿಕೆ ಶಿವಕುಮಾರ್ ಕೂಡ ಸಿಎಂ ಬದಲಾಗಲಿ ಅಂತ ಹೇಳಿಕೆ ಕೊಟ್ಟೆ ಇಲ್ಲ 2028ರಲ್ಲೂ ನಾನೇ ಪಕ್ಷವನ್ನು ಮುನ್ನಡೆಸುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.