ಮುಂಬೈ : ತೀವ್ರ ಹಗ್ಗ ಜಗ್ಗಾಟದ ನಡುವೆ ಕೊನೆಗೂ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಅವರು ಆಯ್ಕೆಯಾಗಿದ್ದಾರೆ. ನಿನ್ನೆ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ದೇವೇಂದ್ರ ಫಡ್ನವೀಸ್ ನೂತನ ಸಿಎಂ ಎಂದು ಘೋಷಣೆ ಮಾಡಲಾಯಿತು.
ಹೌದು ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಏರುವ ವಿಚಾರದಲ್ಲಿ ಬಿಜೆಪಿ ಮತ್ತು ಮಿತ್ರ ಪಕ್ಷಗಳ ನಡುವೆ ನಡೆದಿದ್ದ ಗೊಂದಲಕ್ಕೆ ಕೊನೆಗೂ ತೆರೆಬಿದ್ದಿದ್ದು, ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಅವರು ಆಯ್ಕೆಯಾಗಿದ್ದಾರೆ. ಇಂದು ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವಿಸ್ ನೇತೃತ್ವದ ಸರ್ಕಾರದಲ್ಲಿ ಏಕನಾಥ್ ಶಿಂಧೆ, ಅಜಿತ್ ಪವಾರ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.
ದೇವೇಂದ್ರ ಫಡ್ನವೀಸ್ ಅವರು ನೂತನ ಸಿಎಂ ಎಂದು ಮಹಾರಾಷ್ಟ್ರ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಾಗಿದ್ದು, ಕೇಂದ್ರ ವೀಕ್ಷಕರದ ನಿರ್ಮಲಾ, ವಿಜಯ್ ರೂಪಾಣಿ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಯಿತು. ಇಂದು ರಾಜ್ಯಪಾಲರನ್ನು ಮಹಾಯುತಿ ನಿಯೋಗ ಭೇಟಿಯಾಗಲಿದೆ. ಇದೆ ವೇಳೆ ದೇವೇಂದ್ರ ಫಡ್ನವಿಸ್ ಗೆ ಹೋಗುಚ್ಚ ನೀಡಿ ನಾಯಕರು ಅಭಿನಂದಿಸಿದರು. ಸರ್ಕಾರ ರಚನೆಗೆ ಮಹಾಯುತಿ ಮೈತ್ರಿಕೂಟ ಹಕ್ಕು ಮಂಡಿಸಲಿದೆ.
ಇಂದು ಮೂವರು ಪ್ರಮುಖ ನಾಯಕರು ಮಾತ್ರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ದೇವೇಂದ್ರ ಫಡ್ನವಿಸ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮುಂಬೈನ ಆಜಾದ್ ಮೈದಾನದಲ್ಲಿ ಮೂವರು ನಾಯಕರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ.