ಬೆಂಗಳೂರು: ದೇಶದಲ್ಲಿ ಈಗಾಗಲೇ ಕೇಂದ್ರ ಗೃಹ ಇಲಾಖೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (Popular Front of India) ನಿಷೇಧವನ್ನು ಹೊರಡಿಸಿದ್ದು, ಹೀಗಾಗಿ ನಿಷೇಧಕ್ಕೆ ಸಂಬಂಧಪಟ್ಠಂತೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ಪರವಾಗಿ ಯಾರು ಆದ್ರೂ ಪರವಾಗಿ ಮಾತನಾಡಿದ್ರೆ ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಅಂತ ಡಿಜಿಪಿ ಪ್ರವೀಣ್ ಸೂದ್ ಅವರು ತಿಳಿಸಿದ್ದಾರೆ.
ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾತನಾಡಿದರು, ಇದೇ ವೇಳೆ ಅವರು ತಮ್ಮ ಮಾತನ್ನು ಮುಂದುವರೆಸಿ, ಈಗಾಗಲೇ ರಾಜ್ಯದ ನಾನಾ ಕಡೆಗಳಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕೆಲವು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದು, ದಾಳಿ ನಡೆದ ಸ್ಥಳಗಳ ತಹಶಿಲ್ದಾರ್ಗಳ ಮುಂದೆ ಹಾಜರು ಪಡಿಸಿದ್ದು, ಕೆಲವು ಮಂದಿಯನ್ನು ಹತ್ತು, ಹದಿನೈದು, ಏಳು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಅಂತ ತಿಳಿಸಿದರು.
ದೇಶಾದ್ಯಂತ ಎನ್ ಐಎ ದಾಳಿ ಬೆನ್ನಲ್ಲೇ ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದ್ದು, ಕೇಂದ್ರ ಸರ್ಕಾರವು ಪಿಎಫ್ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದೆ.