ಬೆಂಗಳೂರು : ಗೃಹ ಸಚಿವ ಪರಮೇಶ್ವರ ಅವರನ್ನು SIT ಮುಖ್ಯಸ್ಥ ಪ್ರಣಬ್ ಮೋಹಂತಿ ಇಂದು ಭೇಟಿಯಾದರು. ಜಿ ಪರಮೇಶ್ವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಬೆಂಗಳೂರಿನ ಸದಾಶಿವನಾಗರದಲ್ಲಿರುವ ಪರಮೇಶ್ವರ್ ನಿವಾಸದಲ್ಲಿ ಎಸ್ಐಟಿ ಮುಖ್ಯಸ್ಥ ಆಗಿರುವ ಪ್ರಣಬ್ ಮೋಹಂತಿ ಧರ್ಮಸ್ಥಳ ಪ್ರಕರಣದ ಕುರಿತು ಚರ್ಚಿಸಿದರು.
ಬೆಂಗಳೂರಿನ ಸದಾಶಿವ ನಗರ ನಿವಾಸಕ್ಕೆ ಆಗಮಿಸಿದ ಎಸ್ ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ, ಗೃಹ ಸಚಿವ ಡಾ.ಪರಮೇಶ್ವರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಧರ್ಮಸ್ಥಳ ಪ್ರಕರಣದಲ್ಲಿ ಈವರೆಗಿನ ತನಿಖಾ ಬೆಳವಣಿಗೆ, ಎಸ್ ಐಟಿ ಕೈಗೊಳ್ಳಲಿರುವ ಮುಂದಿನ ನಡೆ ವಿಚಾರವಾಗಿ ಚರ್ಚೆ ನಡೆಸಿದರು ಎಂದು ತಿಳಿದುಬಂದಿದೆ.