ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿಗೆ ರಾಜ್ಯ ಸರ್ಕಾರ ತನಿಖೆ ಮುಂದುವರಿಸುವಂತೆ ಸೂಚನೆ ನೀಡಿದೆ. ಇದರ ಬೆನ್ನಲ್ಲೇ ಇಂದು ಬೆಂಗಳೂರಿನ ಸದಾಶಿವ ನಗರದಲ್ಲಿರುವ ಗೃಹ ಸಚಿವ ಜಿ ಪರಮೇಶ್ವರ್ ನಿವಾಸಕ್ಕೆ ಎಸ್ಐಟಿ ಮುಖ್ಯಸ್ಥ ಪ್ರಣವ್ ಮೋಹಂತಿಯವರು ಇಂದು ಭೇಟಿ ನೀಡಿ ಪ್ರಕರಣದ ಮಾಹಿತಿ ನೀಡಿದರು.
ಹೌದು ಧರ್ಮಸ್ಥಳ ಬುರುಡೆ ಪ್ರಕರಣದ ಕುರಿತಂತೆ ಎಸ್ಐಟಿ ಮುಖ್ಯಸ್ಥ ಪ್ರಣವ್ ಮಹಾಂತಿ ಗೃಹ ಸಚಿವ ಜಿ ಪರಮೇಶ್ವರ್ ಅವರನ್ನು ಭೇಟಿಯಾಗಿ ತನಿಖಾ ಪ್ರಗತಿಯ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ಸಂಬಂಧಪಟ್ಟ ಆರೋಪಿ ಚಿನ್ನಯ್ಯ ಪರ ವಕೀಲರು ಸುಪ್ರೀಂಕೋರ್ಟಿಗೆ ಪಿಐಎಲ್ ಸಲ್ಲಿಸಿದರು.
ನಿನ್ನೆ ಸುಪ್ರೀಂಕೋರ್ಟ್ ಪಿಐಎಲ್ ಅನ್ನು ವಜಾ ಗೊಳಿಸಿತ್ತು. ಅರ್ಜಿ ಸಲಿಸಿದ್ದನ್ನು ಚಿನ್ನಯ್ಯ ಮತ್ತು ಬುರುಡೆ ಗ್ಯಾಂಗ್ ಮುಚ್ಚಿಟ್ಟಿತ್ತು ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿ ಈ ಒಂದು ಬ್ಯಾಂಕ್ ಮುಜುಗರ ತಂದಿತ್ತು ಈ ಬಗ್ಗೆ ಪ್ರಣವ್ ಮೋಹಂತಿ ದಾಖಲೆ ಸಮೇತ ಜಿ ಪರಮೇಶ್ವರ್ ಅವರಿಗೆ ಮಾಹಿತಿ ನೀಡಿದರು.