ಬೆಂಗಳೂರು : ರಾಜ್ಯದಲ್ಲಿ ಮತದಾರರ ಪಟ್ಟಿ ಬಳಸಿ ಡಿಜಿಟಲ್ ಜಾತಿಗಣತಿ ನಡೆಸಲು ರಾಜ್ಯ ಸರ್ಕಾರದ ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಮತದಾರರ ಪಟ್ಟಿ ಬಳಸಿ ಡಿಜಿಟಲ್ ಜಾತಿಗಣತಿ ನಡೆಸಲಾಗುವುದು, 6 ವರ್ಷ ಮೇಲ್ಪಟ್ಟವರ ಆಧಾರ್ ದೃಢೀಕರಣ ಕಡ್ಡಾಯವಾಗಿದೆ ಎಂದು ತಿಳಿಸಲಾಗಿದೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಅಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಕೈಗೊಳ್ಳಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ತಿಳಿಸಿದರು.
ಸಮೀಕ್ಷೆಯನ್ನು ಡಿಜಿಟಲ್ ಕೈಗೊಳ್ಳುವುದು ಮತ್ತು ಸಮೀಕ್ಷೆಯನ್ನು ಡಿಜಿಟಲ್ ವಿಧಾನದಲ್ಲಿ ಮಾಡಲು ತಂತ್ರಾAಶದ ಅಭಿವೃದ್ಧಿ ಮತ್ತು ಉಸ್ತುವಾರಿಯನ್ನು ಇ-ಆಡಳಿತ ಇಲಾಖೆ ಮೂಲಕ ಕೈಗೊಳ್ಳಲು; ಹಾಗೂ ಸಮೀಕ್ಷೆಯಲ್ಲಿ ನಮೂದಿಸಲಾಗುವ 6 ವರ್ಷ ಮೇಲ್ಪಟ್ಟ ಪ್ರತಿ ವ್ಯಕ್ತಿಯ ಆಧಾರ್ ದೃಢೀಕರಣವನ್ನು ಕಡ್ಡಾಯಗೊಳಿಸಲು; ಹಾಗೂ ನ್ಯಾ.ನಾಗಮೋಹನ್ದಾಸ್ ರವರ ನೇತೃತ್ವದಲ್ಲಿ ಒಳಮೀಸಲಾತಿಗೆ ಸಂಬAಧಿಸಿದAತೆ, ಪರಿಶಿಷ್ಟ ಜಾತಿ ಸಮೀಕ್ಷೆಗೆ ಸಾರ್ವಜನಿಕವಾಗಿ ಲಭ್ಯವಿರುವ ಚುನಾವಣಾ ಮತದಾರರ ಪಟ್ಟಿಯನ್ನು ಉಪಯೋಗಿಸಿರುತ್ತಾರೆ. ಅದೇ ರೀತಿಯಾಗಿ ಹಿಂದುಳಿದ ವರ್ಗಗಳ ಆಯೋಗವು ನಡೆಸುವ ಸಮೀಕ್ಷೆಗೆ ಸಾರ್ವಜನಿಕವಾಗಿ ಲಭ್ಯವಿರುವ ಚುನಾವಣಾ ಮತದಾರರ ಪಟ್ಟಿಯನ್ನು ಉಪಯೋಗಿಸಿಕೊಂಡು ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಲು; ಮತ್ತು ಸಮೀಕ್ಷಾ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಆಯೋಗದ ಮೇಲುಸ್ತುವಾರಿಯಲ್ಲಿ ಅಗತ್ಯವಿರುವ ಅಧಿಕಾರಿಗಳು, ಶಿಕ್ಷಕರು ಹಾಗೂ ಇತರೆ ಸಿಬ್ಬಂದಿಗಳು ಕೆಲಸ ಮಾಡುವರು.