ಬೆಂಗಳೂರು : ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 2,600 ಗ್ರಾಮ ಆಡಳಿತಾಧಿಕಾರಿಗಳ ಕಚೇರಿ ನಿರ್ವಹಣೆಗೆ ಕ್ರಮ ಕೈಗೊಳ್ಳಲಾಗಿದ್ದು, ಕಾಗದ ರಹಿತ ಆಡಳಿತ ಮತ್ತು ಇ-ಆಫೀಸ್ ಆನ್ಲೈನ್ ಮೂಲಕವೇ ಎಲ್ಲ ಕಡತ ವ್ಯವಹಾರಕ್ಕಾಗಿ ಡಿಜಿಟಲ್ ವ್ಯವಸ್ಥೆ ಜಾರಿ ಮಾಡಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಗ್ರಾಮ ಆಡಳಿತಾಧಿಕಾರಿಗಳು ಕಾಗದ ರಹಿತವಾಗಿ ಕಾರ್ಯನಿರ್ವಹಿಸುವ ಮತ್ತು ಆನ್ಲೈನ್ ಮೂಲಕವೇ ಎಲ್ಲಾ ಕಡತಗಳನ್ನು ಇ- ಆಫೀಸ್ ಗೆ ಕಳುಹಿಸುವ ಡಿಜಿಟಲ್ ವ್ಯವಸ್ಥೆ ಜಾರಿ ಮಾಡಲಾಗುವುದು. 4000 ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ಟಾಪ್ ಗಳನ್ನು ವಿತರಿಸಲಾಗಿದೆ. ಪ್ರಾಯೋಗಿಕವಾಗಿ ಆನ್ಲೈನ್ ಮೂಲಕ ಕಾರ್ಯನಿರ್ವಹಿಸುವ ಮತ್ತು ಡಿಜಿಟಲ್ ರೂಪದಲ್ಲಿ ಕಡತಗಳನ್ನು ಕಳುಹಿಸುವ ವ್ಯವಸ್ಥೆಯನ್ನು ಈಗಾಗಲೇ ಆರಂಭಿಸಲಾಗಿದೆ ಎಂದು ಹೇಳಿದ್ದಾರೆ.