ಬೆಂಗಲೂರು : ರಾಜ್ಯದ ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ದೂರವಾಣಿ ಕರೆ ಮಾಡಿ ಶುಭ ಹಾರೈಕೆಗಳನ್ನು ತಿಳಿಸಿದ್ದಾರೆ.
ಮಾತುಕತೆಯ ವೇಳೆ ಡಿ.ಕೆ. ಶಿವಕುಮಾರ್ ಅವರಿಗೆ ಧೈರ್ಯ ಮತ್ತು ವಿಶ್ವಾಸ ತುಂಬಿದ ಸೋನಿಯಾ ಗಾಂಧಿ ಅವರು, “ಪಕ್ಷ ಹಾಗೂ ಸರ್ಕಾರದ ಮಟ್ಟದಲ್ಲಿ ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗಿ. ಕರ್ನಾಟಕವನ್ನು ನೀವು ಯಶಸ್ವಿಯಾಗಿ ಮುನ್ನಡೆಸುತ್ತೀರಿ ಎಂಬ ಅದಮ್ಯ ವಿಶ್ವಾಸ ನನಗಿದೆ. ಈ ಹೊಸ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ, ರಾಜ್ಯದ ಜನತೆಗೆ ಉತ್ತಮ ಆಡಳಿತ ನೀಡಿ. ನಿಮ್ಮ ಮುಂದಿನ ಹಾದಿಯಲ್ಲಿ ಮತ್ತಷ್ಟು ಯಶಸ್ಸು ನಿಮ್ಮದಾಗಲಿ ಎಂದು ಹಾರೈಸಿದರು.
ಇದಕ್ಕೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್ ಅವರು, ಹೈಕಮಾಂಡ್ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.








